• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಿಶ್ವದ ಮೋಸ್ಟ್‌ ವಾಂಟೆಡ್‌ ಅಲ್‌ ಖೈದಾ ಉಗ್ರ ಅಲ್‌ ಜವಾಹಿರಿ ಹತ್ಯೆ

Any Mind by Any Mind
August 2, 2022
in ದೇಶ, ವಿದೇಶ
0
ವಿಶ್ವದ ಮೋಸ್ಟ್‌ ವಾಂಟೆಡ್‌ ಅಲ್‌ ಖೈದಾ ಉಗ್ರ ಅಲ್‌ ಜವಾಹಿರಿ ಹತ್ಯೆ
Share on WhatsAppShare on FacebookShare on Telegram

ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್‌ ಖೈದಾ ಮುಖ್ಯಸ್ಥ ಅಯ್ಮನ್‌ ಅಲ್‌ ಜವಾಹಿರಿ ಅವರನ್ನು ಅಮೆರಿಕ ಹತ್ಯೆಗೈದಿದೆ.

ADVERTISEMENT

ಸೆಪ್ಟೆಂಬರ್ 11, 2001ರ ವಿಶ್ವ ವಾಣಿಜ್ಯ ಸಂಸ್ಥೆ ಮೇಲಿನ ದಾಳಿಯ ಮಾಸ್ಟರ್‌ ಮೈಂಡ್ ಅಲ್-ಖೈದಾ ಮುಖ್ಯಸ್ಥ ಬಿನ್‌ ಲಾಡೆನ್‌ ಹತ್ಯೆಗೈದ ೨೧ ವರ್ಷಗಳ ಬಳಿಕ ಜವಾಹಿರಿ ಅವರನ್ನು ಆಫ್ಘಾನಿಸ್ತಾನದ ಕಾಬೂನ್‌ ನಲ್ಲಿ ಡ್ರೋಣ್‌ ದಾಳಿ ಮೂಲಕ ಅಮೆರಿಕ ಸೇನೆ ಹತ್ಯೆಗೈದಿದೆ.

ಶನಿವಾರ ಕಾಬೂಲ್‌ನಲ್ಲಿ ನಡೆಸಲಾದ ದಾಳಿಯಲ್ಲಿ ಜವಾಹಿರಿ ಹತನಾಗಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಿಸಿದ್ದಾರೆ. ಆತನ ವಿರುದ್ಧದ ಕಾರ್ಯಾಚರಣೆಗೆ ಅಂತಿಮ ಅನುಮೋದನೆ ನೀಡಿದ್ದೆ. ದಾಳಿಯಲ್ಲಿ ನಾಗರಿಕರ ಹತ್ಯೆಯಾಗಿಲ್ಲ. ಇದೀಗ ನ್ಯಾಯ ಒದಗಿಸಲಾಗಿದೆ. ಉಗ್ರ ಸಂಘಟನೆ ನಾಯಕ ಇನ್ನಿಲ್ಲ. ಈ ಮೂಲಕ ಕೊನೆಗೂ ಅಮೆರಿಕನ್ನರಿಗೆ ನ್ಯಾಯ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕಾಬೂಲ್‌ನ ನಿವಾಸದ ಬಾಲ್ಕನಿಯಲ್ಲಿ ಝವಾಹಿರಿಯನ್ನು ಡ್ರೋನ್ ದಾಳಿಯ ಮೂಲಕ ಹತ್ಯೆ ಮಾಡಲಾಗಿದೆ. ಅಫ್ಘಾನಿಸ್ತಾನದಲ್ಲಿ ನಮ್ಮ ಪಡೆಗಳು ಈಗ ಇಲ್ಲ ಎಂದು ಅಮೆರಿಕ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಝವಾಹಿರಿಯು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಇರುವುದು 2020ರಲ್ಲಿ ದೋಹಾದಲ್ಲಿ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂದರ್ಭದಲ್ಲಿ ತಾಲಿಬಾನ್ ಜತೆ ಮಾಡಿಕೊಂಡಿದ್ದ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

2021ರ ಆಗಸ್ಟ್ 31ರಂದು ಅಮೆರಿಕದ ಪಡೆಗಳು ಅಫ್ಗಾನಿಸ್ತಾನದಿಂದ ವಾಪಸಾದ ಬಳಿಕ ಅಮೆರಿಕವು ಅಲ್ಲಿ ನಡೆಸಿದ ಮೊದಲ ದಾಳಿ ಇದಾಗಿದೆ. ಮೂಲತಃ ಈಜಿಪ್ಟ್‌ನವನಾಗಿದ್ದ ಝವಾಹಿರಿ ಕೈರೊದಲ್ಲಿ ಬಾಲ್ಯ ಕಳೆದಿದ್ದ. ವೃತ್ತಿಯಲ್ಲಿ ಶಸ್ತ್ರಚಿಕಿತ್ಸಕನಾಗಿದ್ದ ಆತ ನಂತರ ಹಿಂಸಾತ್ಮಕ ಮೂಲಭೂತವಾದದಲ್ಲಿ ತೊಡಗಿಕೊಂಡಿದ್ದ.  2001ರ ಸೆಪ್ಟೆಂಬರ್‌ 11ರ ದಾಳಿ ಬಳಿಕ ತಲೆಮರೆಸಿಕೊಂಡಿದ್ದ.

ಒಸಾಮಾ ಬಿನ್ ಲಾಡೆನ್‌ನಲ್ಲಿ ಅಮೆರಿಕದ ವಿಶೇಷ ಪಡೆಗಳು 2011ರಲ್ಲಿ ಹತ್ಯೆ ಮಾಡಿದ ಬಳಿಕ ಅಲ್‌ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಝವಾಹಿರಿ. ಆತನ ಸುಳಿವು ನೀಡಿದವರಿಗೆ 2.5 ಕೋಟಿ ಡಾಲರ್ ಇನಾಮು ಘೋಷಿಸಲಾಗಿತ್ತು.

Previous Post

ಕೊನೆಗೂ ಅಂತ್ಯಗೊಂಡ 5ಜಿ ಸ್ಪೆಕ್ಟ್ರಂ ಹರಾಜು ಪ್ರಕ್ರಿಯೆ: ಅತಿದೊಡ್ಡ ಬಿಡ್‌ದಾರನಾಗಿ ಹೊರಹೊಮ್ಮಿದ ಜಿಯೋ

Next Post

ಫಾಜಿಲ್‌ ಹತ್ಯೆಗೈದ 6 ಮಂದಿ ಅರೆಸ್ಟ್:‌  ಹತ್ಯೆಯ ವಿವರ ಬಹಿರಂಗ

Related Posts

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!
Top Story

ಅಬ್ಬರಿಸಿದ ಆರ್‌ಸಿಬಿ ರನ್‌ ಮಷಿನ್‌ ಕೊಹ್ಲಿ : ಪಂಜಾಬ್‌ಗೆ ಬೃಹತ್‌ ಮೊತ್ತದ ಟಾರ್ಗೆಟ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು :  ಐಪಿಎಲ್ 2026ರ ಆವೃತ್ತಿಯ ಇಂದಿನ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 222/4 ರನ್ ಗಳಿಸಿದ್ದು, ರನ್‌ ಮಷಿನ್‌...

Read moreDetails
ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

ಮತ್ತೆ ಡಿಸಿಎಂ ಆಗ್ತಾರಾ ಅಥಣಿ ಶಾಸಕ..? : ಬೆಳಗಾವಿ ಜಿಲ್ಲೆಗೆ ಮಹತ್ವದ ಸ್ಥಾನದ ಬಗ್ಗೆ ಸವದಿ ಹೇಳಿದ್ದೇನು..?

May 17, 2026
KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post
ಫಾಜಿಲ್‌ ಹತ್ಯೆಗೈದ 6 ಮಂದಿ ಅರೆಸ್ಟ್:‌  ಹತ್ಯೆಯ ವಿವರ ಬಹಿರಂಗ

ಫಾಜಿಲ್‌ ಹತ್ಯೆಗೈದ 6 ಮಂದಿ ಅರೆಸ್ಟ್:‌  ಹತ್ಯೆಯ ವಿವರ ಬಹಿರಂಗ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!