• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುದು ನನ್ನ ವಾಗ್ದಾನ : ಮಾಜಿ ಸಿಎಂ ಹೆಚ್‌ಡಿಕೆ

ಪ್ರತಿಧ್ವನಿ by ಪ್ರತಿಧ್ವನಿ
August 5, 2022
in Uncategorized
0
ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುದು ನನ್ನ ವಾಗ್ದಾನ : ಮಾಜಿ ಸಿಎಂ ಹೆಚ್‌ಡಿಕೆ
Share on WhatsAppShare on FacebookShare on Telegram

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯರಗೋಳ್ ಅಣೆಕಟ್ಟೆ ತುಂಬಿ ಹರಿಯುತ್ತಿರುವ ದೃಶ್ಯ ಕಂಡು ನನ್ನ ಮನದುಂಬಿ ಬಂದಿದೆ. ಕುಡಿಯುವ ನೀರಿಲ್ಲದೆ ತತ್ತರಿಸಿದ್ದ ಈ ಭಾಗದ ಜನರಿಗೆ ಪರಿಶುದ್ಧ ನೀರು ಒದಗಿಸಲು 2006ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಯರಗೋಳ್ ಯೋಜನೆಗೆ ಒಪ್ಪಿಗೆ ನೀಡಿದ್ದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್‌ ಮಾಡಿ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಈ ಅಣೆಕಟ್ಟೆಗೆ ನೀರೆಲ್ಲಿಂದ ಬರುತ್ತದೆ ಎಂದು ಮೂಗು ಮುರಿದಿದ್ದವರು ಈಗೊಮ್ಮೆ ನೋಡಬೇಕು. ಅಲ್ಲಿ ಕಂಗೊಳಿಸುತ್ತಿರುವ ʼಜಲಸಿರಿʼ ನೋಡಲು ಎರಡು ಕಣ್ಣು ಸಾಲದು. ಕೋಲಾರ,ಮಾಲೂರು,ಬಂಗಾರಪೇಟೆ,ಕೆಜಿಎಫ್ ಸೇರಿ 4 ತಾಲೂಕುಗಳಿಗೆ ನೀರೊದಗಿಸುವ ಈ ಯೋಜನೆಯನ್ನು ರಾಜ್ಯ ಬಿಜೆಪಿ ಸರಕಾರ ಕೂಡಲೇ ಲೋಕಾರ್ಪಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ನಮ್ಮ ಪಕ್ಷವು ಜನತಾ_ಜಲಧಾರೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾಗ ಕಳೆದ ಏ.24ರಂದು ನಾನೇ ಯರಗೋಳ್‌ʼಗೆ ತೆರಳಿ ಕಳಸಕ್ಕೆ ನೀರು ತುಂಬಿಕೊಂಡಿದ್ದೆ.ಆ ಕ್ಷಣ ನನ್ನ ಸಂತಸಕ್ಕೆ ಪಾರವೇ ಇರಲಿಲ್ಲ.ಬರಪೀಡಿತ ಕೋಲಾರ,ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಇಂಥ ಇನ್ನಷ್ಟು ಯೋಜನೆಗಳ ಅಗತ್ಯವಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತೇವೆ. ಅಂದೇ ನಾನು ಮುಖ್ಯ ಎಂಜಿನೀಯರ್‌, ಸಂಬಂಧಿತ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ಸ್ಥಳದಿಂದಲೇ ಸಂಪರ್ಕಿಸಿ,ತಕ್ಷಣವೇ ಈ ಯೋಜನೆ ಉದ್ಘಾಟಿಸುವಂತೆ ಆಗ್ರಹಿಸಿದ್ದೆ. ಪಂಪ್‌ ಅಳವಡಿಕೆ ಬಾಕಿ ಇದೆ ಎಂದು ಅವರು ಹೇಳಿದ್ದರು.ಗುತ್ತಿಗೆದಾರರಿಗೆ ಹಣ ಬಾಕಿ ಇದೆ ಎಂಬ ಮಾಹಿತಿಯೂ ಇದೆ. ಬಿಜೆಪಿ ಸರಕಾರದ ನಿರ್ಲಕ್ಷ್ಯದ ಪರಾಕಾಷ್ಠೆ ಇದು.

2006 ಮಾ.26ರಂದು ಬಾಗೇಪಲ್ಲಿಯ ಚಿತ್ರಾವತಿ ಅಣೆಕಟ್ಟೆ ಲೋಕಾರ್ಪಣೆ ಮಾಡಿದ ವೇಳೆ ಮಾಧ್ಯಮ ಮಿತ್ರರೊಬ್ಬರು ಯರಗೋಳ್‌ ಬಗ್ಗೆ ಕೇಳಿದ್ದ ಪ್ರಶ್ನೆ ನನ್ನ ಮನಸ್ಸಿಗೆ ನಾಟಿತು. ನಾನು ತಡ ಮಾಡದೇ ಅಧಿಕಾರಿಗಳ ಜತೆ ಚರ್ಚಿಸಿ ಯರಗೋಳ್‌ ಯೋಜನೆಗೆ ಒಪ್ಪಿಗೆ ಕೊಟ್ಟು ಬಜೆಟ್‌ʼನಲ್ಲೇ 50 ಕೋಟಿ ರೂ. ಅನುದಾನ ಮೀಸಲಿಟ್ಟೆ. ನನ್ನ ಸರಕಾರದ ನಂತರ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ತಲಾ 5 ವರ್ಷ ಆಡಳಿತ ನಡೆಸಿದರೂ ಯೋಜನೆ ಪೂರ್ಣವಾಗಲಿಲ್ಲ.‌ 3 ವರ್ಷದಿಂದ ಬಿಜೆಪಿ ಸರಕಾರಕ್ಕೆ ಯರಗೋಳ್‌ ಕಡೆ ಚಿತ್ತವೇ ಇಲ್ಲ. ಅಣೆಕಟ್ಟಿಗೆ ಪಂಪು ಜೋಡಿಸುವುದರಲ್ಲೇ ವರ್ಷಗಳನ್ನೇ ನುಂಗುತ್ತಿದೆ. ಬರಪೀಡಿತ ಜಿಲ್ಲೆಗಳೆಂದರೆ ಬಿಜೆಪಿಗೆ ಅಪಥ್ಯ! ಇದು ನಾಚಿಕೆಗೇಡು ಎಂದು ಕಿಡಿಕಾರಿದ್ದಾರೆ.

ನನ್ನ ಸರಕಾರದ ನಂತರ @BJP4Karnataka, @INCKarnataka ಪಕ್ಷಗಳು ತಲಾ 5 ವರ್ಷ ಆಡಳಿತ ನಡೆಸಿದರೂ ಯೋಜನೆ ಪೂರ್ಣವಾಗಲಿಲ್ಲ.‌ 3 ವರ್ಷದಿಂದ @BJP4Karnataka ಸರಕಾರಕ್ಕೆ ಯರಗೋಳ್‌ ಕಡೆ ಚಿತ್ತವೇ ಇಲ್ಲ. ಅಣೆಕಟ್ಟಿಗೆ ಪಂಪು ಜೋಡಿಸುವುದರಲ್ಲೇ ವರ್ಷಗಳನ್ನೇ ನುಂಗುತ್ತಿದೆ. ಬರಪೀಡಿತ ಜಿಲ್ಲೆಗಳೆಂದರೆ ಬಿಜೆಪಿಗೆ ಅಪಥ್ಯ! ಇದು ನಾಚಿಕೆಗೇಡು.6/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 4, 2022

ನೆರೆ ರಾಜ್ಯಗಳ ಜತೆ ನೀರಿಗಾಗಿ ಗುದ್ದಾಡುವ ಸರಕಾರಕ್ಕೆ ಮಳೆ ನೀರಿನ ಕನಿಷ್ಠ ಪ್ರಜ್ಞೆಯೇ ಇಲ್ಲ. ಬದಲಿಗೆ ಬೆಂಗಳೂರಿನ ವಿಷತ್ಯಾಜ್ಯ ನೀರನ್ನು ಅರೆಬರೆ ಸಂಸ್ಕರಿಸಿ ಹರಿಸುತ್ತಿದೆ. ಈ ಜಿಲ್ಲೆಗಳನ್ನು ಭವಿಷ್ಯದಲ್ಲಿ ರಾಜ್ಯದ ಅತಿದೊಡ್ಡ ʼಆನಾರೋಗ್ಯ ಕೂಪʼವನ್ನಾಗಿ ಮಾಡಲೊರಟಿದೆ. ಈ ಜಿಲ್ಲೆಯ ʼಸ್ವಯಂಘೋಷಿತ ಭಗೀರಥʼರ ಹುನ್ನಾರವೂ ಇದೇ!

ಕೆಲ ವರ್ಷದಿಂದ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸಮೃದ್ಧ ಮಳೆ ಆಗುತ್ತಿದೆ. ಕೆರೆಗಳಲ್ಲಿ ಮಳೆನೀರು ನಿಲ್ಲದೆ, ಪಕ್ಕದ ಆಂಧ್ರ, ತಮಿಳುನಾಡು ಪಾಲಾಗುತ್ತಿದೆ. ಗುತ್ತಿಗೆದಾರರ ಜೇಬು ತುಂಬಿಸಲು ರಾಷ್ಟ್ರೀಯ ಪಕ್ಷಗಳ ಜನವಿರೋಧಿ ಸರಕಾರಗಳು KC ವ್ಯಾಲಿ, HN ವ್ಯಾಲಿಯಂಥ ಕೆಟ್ಟ ಯೋಜನೆಗಳನ್ನು ರೂಪಿಸಿ ಹಣ ಲೂಟಿ ಹೊಡೆಯುತ್ತಿವೆ. ಕೆರೆಕಟ್ಟೆ,ಕಾಲುವೆ,ಗೋಕುಂಟೆಗಳಂಥ ಸಾಂಪ್ರದಾಯಿಕ ಜಲಮೂಲಗಳನ್ನು ನಾಶಗೊಳಿಸಿ ಕಾಗದದ ಮೇಲಷ್ಟೇ ಬಣ್ಣಬಣ್ಣವಾಗಿ ಕಾಣುವ, ದುಡ್ಡು ಹೊಡೆಯುವ ಯೋಜನೆಗಳು ಇನ್ನಾದರೂ ನಿಲ್ಲಲಿ. ಈ ಜಿಲ್ಲೆಗಳನ್ನು ʼಶಾಶ್ವತ ಮರುಭುಮಿʼ ಮಾಡುವುದು ಬೇಡ. ಮಳೆ ನೀರನ್ನು ಸದ್ಬಳಕೆ ಮಾಡಿಕೊಂಡರೆ ಬರಪೀಡಿತ ಜಿಲ್ಲೆಗಳ ಬವಣೆ ನೀಗುತ್ತದೆ.

ಶೀಘ್ರದಲ್ಲೇ ನಾನು ಯರಗೋಳ್‌ ಅಣೆಕಟ್ಟೆಗೆ ಭೇಟಿ ನೀಡುತ್ತೇನೆ. ಗಂಗಾ ಮಾತೆಗೆ ಪೂಜೆ ಸಲ್ಲಿಸಿ ಬಾಗೀನ ಸಮರ್ಪಿಸುತ್ತೇನೆ. ಕೋಲಾರ,ಚಿಕ್ಕಬಳ್ಳಾಪುರದಲ್ಲಿ ಮಳೆನೀರು ಉಳಿಸಿ,ಕೆರೆಕಟ್ಟೆ ಅಭಿವೃದ್ಧಿಪಡಿಸಿ ಜನತೆಗೆ ಪರಿಶುದ್ಧ ನೀರು ಕೊಡುವುವುದು ನನ್ನ ವಾಗ್ದಾನ. ಪಂಚರತ್ನ ಕಾರ್ಯಕ್ರಮದಲ್ಲಿ ಇದನ್ನು ಸೇರ್ಪಡೆ ಮಾಡಲಾಗುವುದು ಎಂದಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

10 ಸಾವಿರಕ್ಕು ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ ಉಳಿಸಿಕೊಂಡ ಸುಪ್ರೀಂ ಕೋರ್ಟ್

Next Post

ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?

Related Posts

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು
Uncategorized

ಬೆಂಗಳೂರಲ್ಲಿ ದೇಶದ ಅತಿದೊಡ್ಡ ಸೈಬರ್ ವಂಚನೆ ಬಯಲು

by ಪ್ರತಿಧ್ವನಿ
November 17, 2025
0

ಬೆಂಗಳೂರು: ಸಿಲಿಕಾನ್ ಸಿಟಿಯ ಹಿರಿಯ ಸಾಫ್ಟ್‌ವೇರ್ ಇಂಜಿನಿಯರ್ ಮಹಿಳೆ ಸೈಬರ್ ವಂಚನೆ ಬಲೆಗೆ ಬಿದ್ದಿದ್ದು, ಬರೋಬ್ಬರಿ 31.83 ಕೋಟಿ ಹಣ ಕಳೆದುಕೊಂಡಿದ್ದಾರೆ. ಇದು ದೇಶದಲ್ಲಿ ಅತಿದೊಡ್ಡ ಸೈಬರ್...

Read moreDetails

ಜಪಾನಿನ ನೈಡೆಕ್ ಕಂಪನಿಯ ಆರ್ಚರ್ಡ್ ಹಬ್ ಗೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ್..

November 15, 2025
ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

ಟೀಕೆ ಮಾಡುತ್ತಿದ್ದವರು ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿ

November 9, 2025
DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

DK Shivakumar: ಜಲ ಯೋಜನೆಗಳ ಬಗ್ಗೆ ಒಂದು ದಿನವೂ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರು..

November 6, 2025
ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

ಡಿಜಿಟಲ್ ಮಾಧ್ಯಮವೂ  ಸಾಮಾಜಿಕ ಜವಾಬ್ದಾರಿಯೂ

October 30, 2025
Next Post
ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?

ಭಾರತವು ಆತ್ಮಹತ್ಯೆಯ ರೂಪದಲ್ಲಿ ಅತಿಹೆಚ್ಚಿನ ಸಂಖ್ಯೆಯ ಯುವ ತಾಯಂದಿರನ್ನು ಏಕೆ ಕಳೆದುಕೊಳ್ಳುತ್ತಿದೆ?

Please login to join discussion

Recent News

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ
Top Story

ಇಂದಿರಾ ಗಾಂಧಿ 108ನೇ ಜನ್ಮದಿನ: ಕಾಂಗ್ರೆಸ್‌ ನಾಯಕರಿಂದ ಗೌರವ ನಮನ

by ಪ್ರತಿಧ್ವನಿ
November 19, 2025
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ
Top Story

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು-ಪುರುಷೋತ್ತಮ ಬಿಳಿಮಲೆ

by ಪ್ರತಿಧ್ವನಿ
November 19, 2025
ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR
Top Story

ಕೊತ್ತಲವಾಡಿ ಸಿನಿಮಾ PRO ಹರೀಶ್ ವಿರುದ್ಧ FIR

by ಪ್ರತಿಧ್ವನಿ
November 19, 2025
Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

November 19, 2025
“ಶಕ್ತಿ ಕೇಂದ್ರ”ದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

“ಶಕ್ತಿ ಕೇಂದ್ರ”ದ ಮುಂದೆ ಡಕಾಯಿತಿ ಮತ್ತು ಗುಂಪು ಗಲಾಟೆ

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada