ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಆರಂಭಗೊಂಡಿದ್ದು, ವಿಪಕ್ಷ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ವಿರುದ್ಧ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಾಂಕರ್ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಆಡಳಿತಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು ಲೋಕಸಭೆಯಲ್ಲಿ ನೂತನ ಉಪರಾಷ್ಟ್ರಪತಿ ಆಯ್ಕೆಗೆ ಮತದಾನ ನಡೆದಿದೆ.
ಉಪರಾಷ್ಟ್ರಪತಿ ಆಯ್ಕೆಗೆ 372 ಮತಗಳ ಅಗತ್ಯವಿದೆ. ಆದರೆ ದೆಹಲಿ ಗವರ್ನರ್ ಆಗಿದ್ದ ಜಗದೀಪ್ ಧಾಂಕರ್ 527 ಮತಗಳನ್ನು ಪಡೆಯುವ ನಿರೀಕ್ಷೆಗೆ ಇದೆ.

543 ಲೋಕಸಭಾ ಸದಸ್ಯರು ಹಾಗೂ 245 ರಾಜ್ಯಸಭಾ ಸದಸ್ಯರು ಸೇರಿದಂತೆ 780 ಮತದಾರರಿದ್ದಾರೆ. 8 ರಾಜ್ಯಸಭಾ ಸ್ಥಾನಗಳು ಖಾಲಿ ಇದ್ದು, 34 ಸದಸ್ಯ ಬಲ ಹೊಂದಿರುವ ತೃಣಮೂಲ ಕಾಂಗ್ರೆಸ್ ಮತದಾನದಿಂದ ದೂರ ಉಳಿಯುವುದಾಗಿ ಈಗಾಗಲೇ ಘೋಷಿಸಿದೆ. ಆದ್ದರಿಂದ 744 ಮತದಾರರು ಮತ ಚಲಾಯಿಸುವ ನಿರೀಕ್ಷೆ ಇದೆ.
ಎನ್ ಡಿಎ 441 ಸದಸ್ಯ ಬಲ ಹೊಂದಿದೆ. ಇದರಲ್ಲಿ 394 ಬಿಜೆಪಿಯದ್ದೇ ಆಗಿದೆ. 5 ನಾಮನಿರ್ದೇಶಿತ ರಾಜ್ಯಸಭಾ ಸದಸ್ಯರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.






