ಅಂಗನವಾಡ ಉದ್ಯೋಗಾಕಾಂಕ್ಷಿ ಮಹಿಳೆ ಅರ್ಜಿ ಸಲ್ಲಿಸಲು ಸಾರ್ವಜನಿಕ ಸೇವಾ ಕೇಂದ್ರಕ್ಕೆ ಹೋಗಿದ್ದ ಸಮಯದಲ್ಲಿ ನಾಲ್ವರು ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.
ಮಹಿಳೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದು ಓರ್ವ ಆರೋಪಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಘಟನೆಯ ವಿಡಿಯೋವನ್ನು ಆರೋಪಿಗಳು ತಮ್ಮ ಫೋನಿನಲ್ಲಿ ಚಿತ್ರೀಕರಿಸಿ ಸಂತ್ರಸ್ತೆಯ ಸಂಬಂಧಿಕರಿಗೆ ಕಳುಹಿಸಿರುವುದರಿಂದ ಘಟನೆ ಬೆಳಕಿಗೆ ಬಂದಿದೆ.
ಮೇ 28ರಂದು ಸಂತ್ರಸ್ತೆ ಸಾರ್ವಜನಿಕ ಸೇವಾ ಕೇಂದ್ರಕ್ಕೆ ಅಂಗನವಾಡಿ ಕಾರ್ಯಕರ್ತೆ ಹುದ್ದಗೆ ಅರ್ಜಿ ಸಲ್ಲಿಸಲು ಹೋದ ಸಮಯದಲ್ಲಿ ಸೇವಾ ಕೇಂದ್ರದ ನಿರ್ವಾಹಕ, ಕಂಪ್ಯೂಟರ್ ನಿರ್ವಾಹಕ, ಅಂಗಡಿ ಮಾಲೀಕ ಸೇರಿದಂತೆ ಅಲ್ಲಿದ್ದ ಮತ್ತೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ.
ಆರೋಪಿಗಳು ಹಾಗೂ ಸಂತ್ರಸ್ತೆ ಆಲಿಗಢ ಮೂಲದವರಾಗಿದ್ದು ಸಹಪಾಠಿಗಳೆಂದು ತಿಳಿದು ಬಂದಿದೆ. ಪ್ರಕರಣ ದಾಖಲಾಗಿದ್ದಿ ತನಿಖೆಯನ್ನು ಚುರುಕುಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಶ್ರೀಶ್ ಚಂದ್ರ ತಿಳಿಸಿದ್ದಾರೆ.