• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ

ಪ್ರತಿಧ್ವನಿ by ಪ್ರತಿಧ್ವನಿ
August 17, 2022
in ಸಿನಿಮಾ
0
ಪ್ಯಾನ್ ಇಂಡಿಯಾ ಚಿತ್ರವಾಗಿ ಬರಲಿದೆ ಬಂಕಿಮಚಂದ್ರರ ಆನಂದಮಠ
Share on WhatsAppShare on FacebookShare on Telegram

‘ಬಾಹುಬಲಿ’ ಚಿತ್ರಗಳ ನಂತರ ಪ್ಯಾನ್ ಇಂಡಿಯಾ ನಿರ್ದೇಶಕ ಎಂದೇ ಖ್ಯಾತರಾಗಿರುವ ಎಸ್.ಎಸ್. ರಾಜಮೌಳಿ ನಿರ್ದೇಶನದ ‘ಈಗ’ ಮತ್ತು ‘ಬಾಹುಬಲಿ’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಅಶ್ವಿನ್ ಗಂಗರಾಜು ಇದೀಗ ‘1770’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. 75ನೇ ಸ್ವಾತಂತ್ರ್ಯೋತ್ಸದ ಹಿನ್ನೆಲೆಯಲ್ಲಿ ಈ ಚಿತ್ರವನ್ನು ಅಧಿಕೃತವಾಗೊಗಿ ಘೋಷಿಸಲಾಗಿದೆ.

ADVERTISEMENT

ಬಂಕಿಮ ಚಂದ್ರ ಚಟರ್ಜಿ ಅವರ ‘ಆನಂದಮಠ’ ಕಾದಂಬರಿಯನ್ನು ಆಧರಿಸಿದ ಈ ಬಹುಭಾಷಾ ಚಿತ್ರವನ್ನು ಎಸ್ಎಸ್1 ಎಂಟರ್ಟೈನ್ಮೆಂಟ್ ಮತ್ತು ಪಿಕೆ ಎಂಟರ್ಟೈನ್ಮೆಂಟ್ ಸಂಸ್ಥೆಗಳಡಿ ಶೈಲೇಂದ್ರ ಕುಮಾರ್, ಸುಜಯ್ ಕುಟ್ಟಿ, ಕೃಷ್ಣಕುಮಾರ್ ಬಿ ಮತ್ತು ಸೂರಜ್ ಶರ್ಮ ನಿರ್ಮಿಸುತ್ತಿದ್ದಾರೆ. ಇನ್ನು, ಖ್ಯಾತ ಲೇಖಕ ಮತ್ತು ಚಿತ್ರನಿರ್ದೇಶಕ ರಾಮ್ ಕಮಲ್ ಮುಖರ್ಜಿ ಈ ಚಿತ್ರದ ಮಾರ್ಗದರ್ಶಕರಾಗಿ ಕೆಲಸ ಮಾಡುತ್ತಿದ್ದಾರೆ. ವಂದೇ ಮಾತರಂಗೆ 150 ವರ್ಷವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಈ ಹಿಂದೆ ‘ಆಕಾಶವಾಣಿ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಅಶ್ವಿನ್ ಗಂಗರಾಜು ಅವರಿಗೆ ಇದು ನಿರ್ದೇಶಕರಾಗಿ ಎರಡನೆಯ ಚಿತ್ರ. ಈ ಕುರಿತು ಮಾತನಾಡುವ ಅವರು, ‘ಇಂಥದ್ದೊಂದು ಅದ್ಭುತ ದೃಶ್ಯಕಾವ್ಯವನ್ನು ತೆರೆಗೆ ತರುವುದು ದೊಡ್ಡ ಸವಾಲು. ಆದರೆ, ರಾಜಮೌಳಿ ಅವರ ತಂದೆ ವಿ. ವಿಜಯೇಂದ್ರ ಪ್ರಸಾದ್ ಅವರು ಕಥೆ, ಚಿತ್ರಕಥೆ ರಚಿಸುತ್ತಿರುವುದರಿಂದ, ಚಿತ್ರ ಅದ್ಭುತವಾಗಿ ಮೂಡಿಬರುತ್ತದೆ ಎಂಬ ವಿಶ್ವಾಸವಿದೆ. ಒಬ್ಬ ನಿರ್ದೇಶಕನಾಗಿ ಬೇರೆ ಕಾಲಘಟ್ಟದ, ಎಮೋಷನ್ಗಳು ಹೆಚ್ಚಿರುವಂತಹ ಮತ್ತು ಆಕ್ಷನ್ ದೃಶ್ಯಗಳಿಗೆ ಹೆಚ್ಚು ಮಹತ್ವ ಇರುವಂತಹ ಚಿತ್ರಗಳನ್ನು ನಿರ್ದೇಶಿಸಬೇಕು ಎನ್ನುವುದು ನನ್ನ ವೈಯಕ್ತಿಕ ಆಸೆ. ಅದಕ್ಕೆ ಅನುಗುಣವಾಗಿ, ಈ ಕಥೆಯಲ್ಲಿ ಎಲ್ಲವೂ ಇದೆ. ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಬೇಕು ಎನ್ನುವುದು ನಿರ್ಮಾಪಕರ ಕನಸಾಗಿದ್ದು, ಆ ಕನಸನ್ನು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪರಿಪೂರ್ಣವಾಗಿ ನಿಭಾಯಿಸುತ್ತೇನೆ ಎಂಬ ನಂಬಿಕೆ ನನಗಿದೆ’ ಎನ್ನುತ್ತಾರೆ ಆಶ್ವಿನ್. ಈಗಾಗಲೇ ಅವರು ಚಿತ್ರ ತಂಡದೊಂದಿಗೆ ಈ ಚಿತ್ರದ ಕುರಿತು ಸಾಕಷ್ಟು ರೀಸರ್ಚ್ ಮಾಡಿ, ಚಿತ್ರೀಕರಣಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಬಂಕಿಮ್ ಚಂದ್ರ ಅವರ ‘ಆನಂದಮಠ’ ಕಾದಂಬರಿಯಲ್ಲಿ ಮೊದಲ ಬಾರಿಗೆ ವಂದೇ ಮಾತರಂ ಕವನವು ಪ್ರಕಟವಾಗಿತ್ತು. ಈ ಕವನವು ಬ್ರಿಟಿಷ್ ಸಾಮ್ರಾಜ್ಯವನ್ನು ಅಕ್ಷರಶಃ ಅಲ್ಲಾಡಿಸಿತ್ತು. ವಂದೇ ಮಾತರಂ ಎನ್ನುವುದು ಮಹರ್ಷಿ ಬಂಕಿಮ ಚಂದ್ರರು ದೇಶವನ್ನು ಒಗ್ಗೂಡಿಸಲು ಉಚ್ಛರಿಸಿದ ಒಂದು ಮಂತ್ರ ಎನ್ನುತ್ತಾರೆ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಬರೆದಿರುವ ವಿಜಯೇಂದ್ರ ಪ್ರಸಾದ್. ‘ಈ ದೇಶವು ಬ್ರಿಟಿಷರಿಂದ ಅನುಭವಿಸುತ್ತಿದ್ದ ದಾಸ್ಯ ಮತ್ತು ಅನ್ಯಾಯದ ವಿರುದ್ಧ ಭಾರತೀಯರನ್ನು ಒಗ್ಗೂಡಿಸಲು ಬಳಿಸದ ಒಂದು ಮಂತ್ರವಾಗಿತ್ತು. ಈ ಚಿತ್ರದಲ್ಲಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ ಅದೆಷ್ಟೋ ಅಜ್ನಾತ ವೀರ ಯೋಧರ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದೇವೆ’ ಎನ್ನುತ್ತಾರೆ.

ದೊಡ್ಡ ಬಜೆಟ್ನ ಮತ್ತು ಗಾತ್ರದ ಚಿತ್ರಗಳನ್ನು ಮಾಡುವುದಕ್ಕೆ ಇದು ಒಳ್ಳೆಯ ಸಮಯ ಎನ್ನುತ್ತಾರೆ ಎಸ್ಎಸ್1 ಎಂಟರ್ಟೈನ್ಮೆಂಟ್ನ ಶೈಲೇಂದ್ರ ಕುಮಾರ್. ‘ಮೂಲತಃ ಜಾನ್ಸಿಯವರಾದ ನಾವು ವಂದೇ ಮಾತರಂ ಹಾಡುತ್ತಾ, ಕೇಳುತ್ತಾ ಬೆಳೆದವರು ನಾವು. ಆದರೆ, ವಿಜಯೇಂದ್ರ ಪ್ರಸಾದ್ ಅವರು ಹೇಳಿದ ಕಥೆಯನ್ನು ಕೇಳಿ ನಿಜಕ್ಕೂ ದಂಗಾದೆವು. ಇಂಥದ್ದೊಂದು ಅಪರೂಪದ ಕಥೆಯನ್ನು ತೆರೆಯ ಮೇಲೆ ತರುವುದಕ್ಕೆ ಕೈ ಜೋಡಿಸಿರುವ ಸುಜಯ್ ಕುಟ್ಟಿ ಮತ್ತು ಕೃಷ್ಣಕುಮಾರ್ ಅವರಿಗೆ ನಾವು ಆಭಾರಿ. ಇದೊಂದು ಬರೀ ಚಿತ್ರವಲ್ಲ, ಬೆಳ್ಳಿಪರದೆಯ ಮೇಲೆ ಜನರನ್ನು ದೊಡ್ಡ ಮಟ್ಟದಲ್ಲಿ ಮನರಂಜಿಸಬೇಕು ಎಂಬ ದೊಡ್ಡ ಕನಸು’ ಎನ್ನುತ್ತಾರೆ ಶೈಲೇಂದ್ರ ಕುಮಾರ್.

ಸುಜಯ್ ಕುಟ್ಟಿ ಈ ಹಿಂದೆ ಜೀ ಸ್ಟುಡಿಯೋಸ್ ಸಂಸ್ಥೆಯಲ್ಲಿ ಹಲವು ಜವಾಬ್ದಾರಿಗಳನ್ನು ನಿರ್ವಹಿಸಿದವರು. ‘ಮಣಿಕರ್ಣಿಕಾ – ದಿ ಕ್ವೀನ್ ಆಫ್ ಜಾನ್ಸಿ’ ಮುಂತಾದ ಚಿತ್ರದ ನಿರ್ಮಾಣದಲ್ಲಿ ಗುರುತಿಸಿಕೊಂಡಿದ್ದವರು. ತಮ್ಮ ಹಾಗೂ ವಿಜಯೇಂದ್ರ ಪ್ರಸಾದ್ ಅವರ ಸ್ನೇಹ ಚಿತ್ರಗಳನ್ನು ಮೀರಿದ್ದು ಎನ್ನುವ ಅವರು, ‘ವಿಜಯೇಂದ್ರ ಪ್ರಸಾದ್ ಅವರು ನಮಗೆಲ್ಲರಿಗೂ ಸ್ಫೂರ್ತಿ. ನಾವು ‘1770’ ಚಿತ್ರವನ್ನು ನಿರ್ಮಿಸಿದರೆ, ಅದನ್ನು ವಿಜಯೇಂದ್ರ ಪ್ರಸಾದ್ ಅವರೇ ಬರೆಯಬೇಕು ಎಂದು ಮೊದಲೇ ಹೇಳಿದ್ದೆ. ಇಲ್ಲವಾದರೆ ಈ ಚಿತ್ರ ಮಾಡುವುದಿಲ್ಲ ಎಂದಿದ್ದೆ. ಅದಕ್ಕೆ ಸರಿಯಾಗಿ, ಅವರು ಒಪ್ಪಿ ನಮ್ಮ ಚಿತ್ರದ ಕಥೆ-ಚಿತ್ರಕಥೆಯನ್ನು ಪ್ರೀತಿಯಿಂದ ಬರೆದುಕೊಟ್ಟಿದ್ದಾರೆ’ ಎನ್ನುತ್ತಾರೆ ಸುಜಯ್ ಕುಟ್ಟಿ.

‘1770’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ದಸರಾ ಹೊತ್ತಿಗೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಱರು ಆಯ್ಕೆಯಾಗಲಿದ್ದು, ದೀಪಾವಳಿ ವೇಳೆಗೆ ಅಧಿಕೃತ ಘೋಷಣೆಯಾಗಲಿದೆ.

Tags: BJPCongress Partyಬಿಜೆಪಿ
Previous Post

ಬಿಎಸ್‌ವೈಗೆ ಸಂಸದೀಯ ಮಂಡಳಿಯಲ್ಲಿ ಸ್ಥಾನ : ನಮ್ಮ ಬಲ ಹೆಚ್ಚಿದೆ ಎಂದ ಸಿಎಂ ಬೊಮ್ಮಾಯಿ

Next Post

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

Related Posts

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
0

ಕನ್ನಡ‌ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್(Green) ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ. https://youtu.be/v2kOW8m5SWg?si=_pISA5B40rv2ey9a ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ...

Read moreDetails
BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

BBK 12: ಕ್ಯಾಪ್ಟನ್ಸಿ ಟಾಸ್ಕ್‌ ಗೆದ್ದ ರಾಶಿಕಾ ಜೊತೆ ಸೂರಜ್ ಕಿತ್ತಾಟ

December 13, 2025
ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು?  ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

ದರ್ಶನ್ ಸ್ಕ್ರೀನ್‌ ಮೇಲೆ ಬರ್ತಿದ್ದಂತೆ ಏನಾಯ್ತು? ಭಾವುಕ ಪೋಸ್ಟ್‌ ಹಂಚಿಕೊಂಡ ವಿಜಯಲಕ್ಷ್ಮಿ

December 12, 2025
BBK 12: ವಿಲನ್‌ ಕೊಟ್ಟ ವಿಚಿತ್ರ ಟಾಸ್ಕ್‌ ಸ್ವೀಕರಿಸಿದ ಮಾಳು..!

BBK 12: ವಿಲನ್‌ ಕೊಟ್ಟ ವಿಚಿತ್ರ ಟಾಸ್ಕ್‌ ಸ್ವೀಕರಿಸಿದ ಮಾಳು..!

December 12, 2025
ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

ಸೂರಿ ಅಣ್ಣ ಚಿತ್ರದ ʼನೀ ನನ್ನ ದೇವತೆʼ ಸಾಂಗ್ ರಿಲೀಸ್‌

December 11, 2025
Next Post
ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಮತಗಳ ಮೇಲೆ ಕೇಂದ್ರೀಕರಿಸುತ್ತದೆ : ಸಚಿವ ಬಿ.ಸಿ.ನಾಗೇಶ್

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಫಲಿತಾಂಶ ಪ್ರಕಟ

Please login to join discussion

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada