• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಬಿಎಂಪಿ ಚುನಾವಣೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಿ ಸರ್ಕಾರ ಆದೇಶ : ಕೈ ನಾಯಕರು ಕೊತಕೊತ

ಕರ್ಣ by ಕರ್ಣ
August 17, 2022
in ಕರ್ನಾಟಕ, ರಾಜಕೀಯ
0
ಬಿಬಿಎಂಪಿ ಚುನಾವಣೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸಿ ಸರ್ಕಾರ ಆದೇಶ : ಕೈ ನಾಯಕರು ಕೊತಕೊತ
Share on WhatsAppShare on FacebookShare on Telegram

ಬಿಬಿಎಂಪಿ ಚುನಾವಣೆ ಸಂಬಂಧ ವಾರ್ಡ್ ಮರುವಿಂಗಡಣೆ ಆಯ್ತು.‌ ವಿಂಗಡಣೆಯಾದ ವಾರ್ಡ್ ಗಳಿಗೆ ಮೀಸಲಾತಿಯನ್ನು ನಿಗಧಿ ಮಾಡಿಯೂ ಆಯ್ತು. ಆದ್ರೆ ಮೀಸಲಾತಿ ನಿಗಧಿ ಸಂಬಂಧ ಅಸಮಧಾನ ಹೊರಬಿದ್ದಿದ್ದು ಈ ಅಸಮಧಾನದ ನಡುವೆಯೇ ಅಂತಿಮ ಪಟ್ಟಿ ಪ್ರಕಟವಾಗಿದ್ರೆ, ಇತ್ತ ಹೈ ಕೋರ್ಟ್ ನಲ್ಲಿ ಪಾಲಿಕೆ ಚುನಾವಣೆ ಸಂಬಂಧ ವಿಚಾರಣೆಯೂ ನಡೆದಿದೆ.

ADVERTISEMENT

ರಾತ್ರೋರಾತ್ರಿ ಬಿಬಿಎಂಪಿ ವಾರ್ಡ್ ಮೀಸಲಾತಿ ಅಂತಿಮ ಪಟ್ಟಿ ಪ್ರಕಟ

ಬಿಬಿಎಂಪಿ ಚುನಾವಣೆ ಸಂಬಂಧ ವಾರ್ಡ್ ಮೀಸಲಾತಿ ಅಂತಿಮ‌ ಪಟ್ಟಿ ಪ್ರಕಟವಾಗಿದೆ. ಕಳೆದ 15 ದಿನಗಳ ಹಿಂದೆ ವಾರ್ಡ್ ವಾರು ಮೀಸಲಾತಿ ಕರುಡು ಪಟ್ಟಿ ಪ್ರಕಟಿಸಿದ್ದ ಸರ್ಕಾರ, 10 ದಿನಗಳ ಕಾಲ ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ ನೀಡಿತ್ತು. ಹೀಗಾಗಿ 3000 ಕ್ಕೂ ಹೆಚ್ಚು ಆಕ್ಷೇಪಣೆ ಅರ್ಜಿಗಳು ಸಲ್ಲಿಸಿಕೆಯಾಗಿದ್ವು.‌ ಸಾರ್ವಜನಿಕ ಆಕ್ಷೇಪಣೆ ಪರಿಶೀಲನೆ ನಂತರ ಸರ್ಕಾರ ಅಂತಿಮ‌ ಪಟ್ಟಿ ಪ್ರಟಿಸಿದ್ದು, 2011 ರ ಜನಗಣತಿಯಂತೆ ಮೀಸಲಾತಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಿದೆ.‌ ಆಕ್ಷೇಪಣೆಗಳ ಪರಿಶೀಲನೆಗಾಗಿ ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿ ರಚನೆ ಮಾಡಲಾಗಿತ್ತು.‌ ಈ ಪರಿಶೀಲನಾ ಸಮಿತಿ 243 ವಾರ್ಡ್ ಗಳ ಮೀಸಲಾತಿ ಆಕ್ಷೇಪಣೆಗಳನ್ನ ಕೂಲಂಕಷ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಸದ್ಯ ಸಮಿತಿಯ ಶಿಫಾರಸ್ಸುಗಳನ್ನ ಒಪ್ಪಿ ಸರ್ಕಾರ ಕಳೆದ ರಾತ್ರಿ ಅಂತಿಮ ಅಧಿಸೂಚನೆ ಹೊರಡಿಸಿದೆ.‌

ಸಾವಿರಾರು ಆಕ್ಷೇಪಣೆಗಳು ಇದ್ರೂ ಯಾವುದೇ ಬದಲಾವಣೆ ಮಾಡದ ಸರ್ಕಾರ

ವಾರ್ಡ್ ಮೀಸಲಾತಿ ಸಂಬಂಧ ಸರ್ಕಾರ 243 ವಾರ್ಡ್ ಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಳೆಯ ಅಧಿಸೂಚನೆಯನ್ನೇ ಹೋಲುವ ಅಂತಿಮ ಅಧಿಸೂಚನೆಯನ್ನ ಹೊರಡಿಸಿದ್ದು, ಮೀಸಲಾತಿ ವಿಚಾರದಲ್ಲಿ ಸರ್ಕಾರ ತಾರತಮ್ಯ ಮಾಡ್ತಿದೆ ಎಂದು ಕಾಂಗ್ರೆಸ್ ನಾಯಕರು ಅಸಮಧಾನ ಹೊರ ಹಾಕಿದ್ದಾರೆ.‌ ನಾಮಕಾವಸ್ಥೆಗೆ ಸರ್ಕಾರ ಆಕ್ಷೇಪಣೆಗಳನ್ನ ಸ್ವೀಕರಿಸಿದ್ದು 3000 ಕ್ಕೂ ಹೆಚ್ಚು ಆಕ್ಷೇಪಣೆಗಳು ಸಲ್ಲಿಕೆಯಾಗಿದ್ರೂ ಯಾವುದೇ ಬದಲಾವಣೆ ಮಾಡಿಲ್ಲ. ಕಾಂಗ್ರೆಸ್ ಜೆಡಿಎಸ್ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಹೆಚ್ಚು ಮೀಸಲಾತಿ ನೀಡಲಾಗಿದ್ದು, ಹೆಚ್ಚಿನ ಸಾಮಾನ್ಯ ಮೀಸಲಾತಿಗಳು ಬಿಜೆಪಿ ಪ್ರಭಾವವಿರುವ ವಾರ್ಡ್ ಗಳಲ್ಲಿ ನಿಗಧಿ ಮಾಡಲಾಗಿದೆ.‌ ಹಿಂದಿನ ಮೀಸಲಾತಿ ಪಟ್ಟಿ ಅಧಿಸೂಚನೆಗೂ ಅಂತಿಮ ಅಧಿಸೂಚನೆಗೂ ವ್ಯತ್ಯಾಸ ಇಲ್ಲ ಅಂತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ‌‌.

ಸರ್ಕಾರದ ಮೀಸಲಾತಿ ವಿರುದ್ಧ ರೊಚ್ಚಿಗೆದ್ದ ಕಾಂಗ್ರೆಸ್ ನಾಯಕರು

ಇನ್ನು ಮೀಸಲಾತಿ ಅಕ್ಷೇಪಣೆ ಅರ್ಜಿಗಳನ್ನೂ ಇಂದು ವಿಚಾರಣೆ ನಡೆಸಿದ ಹೈಕೋರ್ಟ ಇದೆ ತಿಂಗಳು 26 ರಂದು ಸುಪ್ರೀಂ ಕೋರ್ಟನಲ್ಲಿ ವಿಚಾರಣೆ ಇದೆ. ಅದನ್ನೂ ನೋಡಿ ಮುಂದಿನ ತೀರ್ಮಾನ ಕೈಗೋಳ್ತಿವಿ ಅಂತ ಅರ್ಜಿದರರ ಪರ ವಕೀಲರಿಗೆ ಸೂಚಿಸಿದೆ.‌ ಇತ್ತ ಹೈಕೋರ್ಟನಲ್ಲಿ ಚುನಾವಣೆ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದ ಮಂಡಿಸಿ, ಸುಪ್ರೀಂ ಕೋರ್ಟ್ ಶೀಘ್ರ ಚುನಾವಣೆ ನಡೆಸಲು ಸೂಚಿಸಿದೆ. ಅರ್ಜಿದಾರರಿಗೆ ಆಕ್ಷೇಪಣೆಗಳಿದ್ದರೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಿ. ಸುಪ್ರೀಂ ಕೋರ್ಟ್ ನಿಂದಲೇ ಸ್ಪಷ್ಟನೆ ಪಡೆಯಲಿ. ಸೆ.22 ರೊಳಗೆ ಮತದಾರರ ಪಟ್ಟಿ ಅಂತಿಮಗೊಳಿಸಲಾಗುವುದು. ಸೆ.22 ರ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ಆರಂಭವಾಗುತ್ತೆ ಅಂತ ವಾದಮಂಡಿಸಿದರು. ಇತ್ತ ಅರ್ಜಿದಾರರ ವಕೀಲರು ರಾಜ್ಯ ಸರ್ಕಾರ ನಿನ್ನೆ ಮೀಸಲಾತಿ ಅಂತಿಮ ಅಧಿಸೂಚನೆ ಹೊರಡಿಸಿದೆ. ಹೀಗಾಗಿ ವಾರ್ಡ್ ಪುನರ್ವಿಂಗಡಣೆಗೆ ತಡೆ ಕೋರಿ ವಾದ ಮಂಡಿಸಿದರು.ಅದ್ರೆ ಸರ್ಕಾರ ಎಲ್ಲವನ್ನೂ ತರಾತುರಿಯಲ್ಲಿ ಮಾಡುತ್ತಿದೆ. ಸುಪ್ರೀಂ ಕೋರ್ಟ್ ನಿಂದಲೇ ಸ್ಪಷ್ಟನೆ ಪಡೆಯುವುದು ಸೂಕ್ತ ಅಂತ ನ್ಯಾಮೂರ್ತಿ ಹೇಮಂತ್ ಚಂದನ್ ಗೌಡರ್ ಅಭಿಪ್ರಾಯ ವ್ಯಾಕ್ತಪಡಿಸಿ, ವಿಚಾರಣೆಯನ್ನೂ ಆ.29 ಕ್ಕೆ ಮುಂದೂಡಿದೆ. ಒಟ್ನಲ್ಲಿ ವಾರ್ಡ್ ಮೀಸಲಾತಿ ಸಂಬಂಧ ಅಸಮಧಾನ ಇದ್ದರೂ ಸರ್ಕಾರ ಹಳೆಯ ಮೀಸಲಾತಿಯನ್ನೆ ಅಂತಿಮ‌ ಮಾಡಿದೆ.‌ ಹೀಗಾಗಿ ಮುಂದೆ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಕಾರ್ಪೋರೇಟರ್ ಗಳ ನಡೆ ಹೇಗಿರಲಿದೆ ಎಂಬುದೆ ಪ್ರಶ್ನೆಯಾಗಿ ಉಳಿದಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಗಾಯಾಳು ಪ್ರೇಮ್‌ ಸಿಂಗ್‌ ಆರೋಗ್ಯ ವಿಚಾರಿಸಿದ ಬಿಜೆಪಿ ನಾಯಕರು

Next Post

ಜನೋತ್ಸವವನ್ನ ಮುಂದೂಡಿದ ಬಿಜೆಪಿ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಜನೋತ್ಸವವನ್ನ ಮುಂದೂಡಿದ ಬಿಜೆಪಿ

ಜನೋತ್ಸವವನ್ನ ಮುಂದೂಡಿದ ಬಿಜೆಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada