ಶಾಲಾ ಬಸ್ ಹಾಗು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಗಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಶನಿವಾರ ಬೆಳ್ಳಂ ಬೆಳ್ಳಗ್ಗೆ ನಡೆದಿದೆ.
ತಾಲ್ಲೂಕಿನ ಮೀರಜ್ ರಸ್ತೆಯಲ್ಲಿ ಎರಡು ವಾಹನಗಳು ಡಿಕ್ಕಿಯಾಗಿದ್ದು ಕ್ಯಾಂಟರ್ ಹಾಗೂ ಶಾಲಾ ಬಸ್ನ ಚಾಲಕರು ಸ್ಥಳದಲ್ಲೇ ಸಾವಿಗೀಡಾಗಿದ್ದು 10ಕ್ಕೂ ಹೆಚ್ಚಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಅಪಘಾತ ನಡೆಯುತ್ತಿದ್ದಂತೆ ಕೂಡಲ್ಲೇ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬಸ್ನಲ್ಲಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸ್ಥಳವನ್ನ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಅಥಣಿ ಹೊರವಲಯದಲ್ಲಿರುವ ಬಣಜವಾಡ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್ನಲ್ಲಿ ಒಟ್ಟು 20ಕ್ಕು ಹೆಚ್ಚು ವಿದ್ಯಾರ್ಥಿಗಳು ಕಾಲೇಜ್ಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಕ್ಯಾಂಟರ್ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅತಿಯಾದ ವೇಗ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.











