ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಜನದಟ್ಟಣೆ ಉಂಟಾಗಿದ್ದರಿಂದ ಉಸಿರುಗಟ್ಟಿ ಇಬ್ಬರು ಭಕ್ತರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಥುರದಲ್ಲಿ ಸಂಭವಿಸಿದೆ.
ಬಂಕೆ ಬಿಹಾರಿ ದೇವಸ್ಥಾನದಲ್ಲಿ ಶುಕ್ರವಾರ ತಡರಾತ್ರಿ ಹಮ್ಮಿಕೊಂಡಿದ್ದ ಕಾರ್ಯುಕ್ರಮದ ವೇಳೆ ಈ ದುರಂತ ಸಂಭವಿಸಿದೆ.

ದೇವಸ್ಥಾನದಲ್ಲಿ ಆರತಿ ಕಾರ್ಯಕ್ರಮದ ವೇಳೆ ದಿಢೀರನೆ ಭಕ್ತರ ಸಂಖ್ಯೆ ಹೆಚ್ಚಾಗಿದ್ದರಿಂದ ಒಬ್ಬ ಪುರುಷ ಹಾಗೂ ಒಬ್ಬ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಮಥುರದ ಹಿರಿಯ ಪೊಲೀಸ್ ಅಧಿಕಾರಿ ಅಭಿಷೇಕ್ ವಿವರಿಸಿದ್ದಾರೆ.












