ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇಂದು ಆಗಸ್ಟ್ 21ರಂದು ಸಂಗೀತಾ ಎಂಬುವರನ್ನು ವರಿಸಿದ್ದಾರೆ.

ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್ನಲ್ಲಿನ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ನಡೆದ ಮದುವೆಯಲ್ಲಿ ಚಿತ್ರರಂಗ ಗಣ್ಯರು ಭಾಗವಹಿಸಿದ್ದರು. ಇನ್ನು ಇಂದು ಸಂಜೆ ಅರಮನೆ ಮೈದಾನದ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ಆರಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು ಹಾಗೂ ಕೆಲ ರಾಜಕಾರಣಿಗಳು ಭಾಗವಹಿಸುವ ನಿರೀಕ್ಷೆಯಿದೆ.






