ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ವಿರುದ್ಧ ಮತ್ತು ರೈತರ ಭೆಟಿಕೆಯನ್ನು ಈಡೇರಿಸದ ಕಾರಣ ಪ್ರತಿಭಟಿಸಲು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಸೋಮವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ‘ಮಹಾಪಂಚಾಯತ್’ ನಡೆಯುತ್ತಿದ್ದೆ. ವಿವಿಧ ರಾಜ್ಯಗಳಿಂದ ಸಾವಿರಾರು ರೈತರು ಪ್ರತಿಭಟನಾ ಸ್ಥಳಕ್ಕೆ ತಲುಪಿದ್ದಾರೆ. ದೆಹಲಿಯ ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದ್ದು, ಗಾಜಿಪುರ, ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ.
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ರೈತರು ಪ್ರತಿಭಟನಾ ಸ್ಥಳಕ್ಕೆ ತಲುಪಿದ್ದಾರೆ. ಇದು ಒಂದು ದಿನದ ಕಾರ್ಯಕ್ರಮವಾಗಿದ್ದು ಸಂಪೂರ್ಣ ಶಾಂತಿ ಮತ್ತು ಶಿಸ್ತಿನಿಂದ ನಡೆಯಲಿದೆ. ಪಂಚಾಯತ್‌ನ ಸಮಯವು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಇರುತ್ತದೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.
ಕೆಲವೆಡೆ ರೈತರನ್ನು ಜಂತರ್ ಮಂತರ್ ತಲುಪದಂತೆ ತಡೆಯಲಾಗುತ್ತಿದೆ ಎಂದು ಎಸ್‌ಕೆಎಂ ಮುಖಂಡರು ಆರೋಪಿಸಿದ್ದಾರೆ. ಆದರೆ, ದೆಹಲಿ ಪೊಲೀಸರು ರೈತರ ಆರೋಪಗಳನ್ನು ನಿರಾಕರಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಲು ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು. ‘ಪ್ರತಿಭಟನೆ ನಡೆಸಲು ಅನುಮತಿ ಕೇಳಲಾಗಿತ್ತು. ಆದರೆ ಜನಸಂದಣಿಯಿಂದಾಗಿ ಅವಕಾಶ ನೀಡಿ’ ಎಂದು ದೆಹಲಿಯ ಉಪ ಪೊಲೀಸ್ ಆಯುಕ್ತ ಅಮೃತ ಗುಗುಲೋತ್ ತಿಳಿಸಿದ್ದಾರೆ.
ಈ ಹಿಂದೆ ರೈತರ ಚಳವಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಮ್ಮ ಎಲ್ಲ ಬೇಡಿಕೆಗಳನ್ನು ಪರಿಗಣಿಸುವುದಾಗಿ ಭರವಸೆ ನೀಡಿತ್ತು. ಆದರೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ನಮ್ಮ ಬೇಡಿಕೆಗಳ ಕುರಿತು ಮತ್ತೊಮ್ಮೆ ಚರ್ಚಿಸಲು ಮತ್ತು ಚಳವಳಿಯ ಭವಿಷ್ಯದ ಕಾರ್ಯತಂತ್ರವನ್ನು ರೂಪಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕೊಹರ್ ಹೇಳಿದ್ದಾರೆ.

ಕಿಸಾನ್ ಪಂಚಾಯತ್‌ನ ಬೇಡಿಕೆಗಳು ಹೀಗಿವೆ.
1. ಲಖೀಂಪುರ ಖೇರಿ “ಹತ್ಯಾಕಾಂಡ”ದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ರೈತರ ಕುಟುಂಬಗಳಿಗೆ ನ್ಯಾಯ ನೀಡಬೇಕು. ಕಳೆದ ಒಂಬತ್ತು ತಿಂಗಳಿನಿಂದ ಜೈಲಿನಲ್ಲಿರುವ ರೈತರ ಬಿಡುಗಡೆಯಾಗಬೇಕು. ಲಖೀಂಪುರ ಖೇರಿ ಹತ್ಯಾಕಾಂಡದ ಪ್ರಮುಖ ಅಪರಾಧಿ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಬಂಧಿಸಬೇಕು.
2. “C2+50% ಸೂತ್ರ” ದ ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ಕನಿಷ್ಠ ಬೆಂಬಲ ಬೆಲೆ (MSP) ಖಾತರಿಪಡಿಸಬೇಕು. MSP ಯನ್ನು ಖಾತರಿಪಡಿಸಲು ಕಾನೂನನ್ನು ಮಾಡುವ ಭರವಸೆ ನೀಡಬೇಕು.
3. ದೇಶದ ಎಲ್ಲ ರೈತರನ್ನು ಋಣಮುಕ್ತರನ್ನಾಗಿ ಮಾಡಬೇಕು.
4. ವಿದ್ಯುತ್ ತಿದ್ದುಪಡಿ ಮಸೂದೆ 2022 ರದ್ದಾಗಬೇಕು.
5. ಕಬ್ಬಿನ ಬೆಂಬಲ ಬೆಲೆಯನ್ನು ಹೆಚ್ಚಿಸಬೇಕು ಮತ್ತು ಕಬ್ಬಿನ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು.
6. ಭಾರತವು WTO ದಿಂದ ಹೊರಬರಬೇಕು ಮತ್ತು ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳನ್ನು ರದ್ದುಗೊಳಿಸಬೇಕು.
7. ರೈತರ ಚಳವಳಿ ಸಂದರ್ಭದಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು.
8. ಅಗ್ನಿಪಥ ಯೋಜನೆ ಹಿಂಪಡೆಯಬೇಕು. ಇನ್ನು, ದೆಹಲಿ-ಯುಪಿ ಗಡಿಯಲ್ಲಿರುವ ಗಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.