ಸರಿಯಾದ ಸಮಯದಲ್ಲಿ ಸರಕಾರ ತೀರ್ಮಾನ ಕೈಗೊಳ್ಳದೇ ಇರುವುದು ದೊಡ್ಡ ಸಮಸ್ಯೆ ಆಗಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.
ಭಾನುವಾರದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀವು ಬೇಕಾದರೆ ಪವಾಡ ಮಾಡಬಹುದು. ಅಷ್ಟು ಸಂಪನ್ಮೂಲ ನಮ್ಮ ಬಳಿ ಇದೆ. ಭವಿಷ್ಯದ ದೃಷ್ಟಿಯಿಂದ ನೋಡಿದರೆ ನಮ್ಮಲ್ಲಿನ ಮೂಲಸೌಕರ್ಯ ಸಮೃದ್ಧವಾಗಿದೆ. ನಾವು ಉತ್ತಮ ತಂತ್ರಜ್ಞಾನ ಮತ್ತು ಉತ್ತಮ ಸಂಶೋಧನೆಗಳು ನಡೆಯಬೇಕಿದೆ ಎಂದು ಅವರು ಹೇಳಿದರು.

ಗುಣಮಟ್ಟದಲ್ಲಿ ರಾಜೀ ಮಾಡಿಕೊಳ್ಳದೇ ಪರ್ಯಾಯ ಮಾರ್ಗಗಳನ್ನು ಕಂಡು ಹಿಡಿಯಬೇಕಿದೆ. ಆದರೆ ನಿರ್ಮಾಣ ಹಂತದಲ್ಲಿ ಸಮಯ ಅತ್ಯಂತ ಪ್ರಮುಖವಾಗಿದೆ. ಸಮಯ ಅತ್ಯಂತ ಮಹತ್ವದ್ದಾಗಿದೆ. ಆದರೆ ಅತೀ ದೊಡ್ಡ ಸಮಸ್ಯೆ ಅಂದರೆ ಸರಕಾರ ಸರಿಯಾದ ಸಮಯದಲ್ಲಿ ತೀರ್ಮಾನಗಳನ್ನು ಕೈಗೊಳ್ಳದೇ ಇರುವುದು ಎಂದು ಸಾರಿಗೆ ಸಚಿವ ಗಡ್ಕರಿ ಹೇಳಿದ್ದಾರೆ.
ತಂತ್ರಜ್ಞಾನ ಸಂಪನ್ಮೂಲಕ್ಕಿಂತ ಸಮಯ ಅತ್ಯಂತ ಮಹತ್ವದ್ದಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಆದರೆ ಕೆಲವು ದಿನಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಸರಕಾರ ಯಶಸ್ವಿಯಾಗಿ ನಡೆಯುತ್ತಿರುವುದು ಭಾರತ ಅಮೃತ ಘಳಿಗೆ ಆಗಿದೆ ಎಂದು ಹೇಳಿದ್ದರು. ಇದೀಗ ಇಬ್ಬರ ಮಾತಿನ ನಡುವೆ ವ್ಯತ್ಯಾಸ ಕಂಡು ಬಂದಿದ್ದು, ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.