ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರಿಗೆ ಮತ್ತೆ ಕರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ನನ್ನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಕರೋನಾ ಪಾಸಿಟಿವ್ ದೃಢಪಟ್ಟಿದ್ದು, ನನ್ನ ಜೊತೆಗೆ ಇದ್ದವರು ಅಲ್ಲದೆ ನನ್ನ ಸಂಪರ್ಕದಲ್ಲಿದ್ದವರು ಕೂಡಲೇ ಕರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಹಿಂದೆ 2020 ರಲ್ಲಿ ಕೂಡಾ ಕರೋನಾ ಸೋಂಕು ತಗುಲಿತ್ತು.