ದೆಹಲಿಯಲ್ಲಿ ಆಪರೇಷನ್ ಕಮಲ ಆರಂಭಿಸಿರುವ ಬಿಜೆಪಿ 40 ಶಾಸಕರನ್ನು ಸೆಳೆಯಲು ಪ್ರಯತ್ನಿಸಿದೆ. ಆದರೆ ಅವರ ಈ ಪ್ರಯತ್ನ ಫಲ ನೀಡುವುದಿಲ್ಲ ಎಂದು ಆಮ್ ಆದ್ಮಿ ತಿರುಗೇಟು ನೀಡಿದೆ.
ಆಮ್ ಆದ್ಮಿ ಪಕ್ಷದ ಶಾಸಕರಿಗೆ 20 ಕೋಟಿ ಆಮೀಷ ಒಡ್ಡಿರುವ ಬಿಜೆಪಿ, ಬೇರೆ ಶಾಸಕರನ್ನು ಕರೆತಂದರೆ 25 ಕೋಟಿ ರೂ. ನೀಡುವುದಾಗಿ ಭರವಸೆ ನೀಡುವ ಮೂಲಕ ಶಾಸಕರನ್ನು ಸೆಳೆಯಲು ಯತ್ನಿಸಿತ್ತು.
ಬಿಜೆಪಿ ಆಪರೇಷನ್ ಕಮಲದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶಾಸಕರ ತುರ್ತು ಸಭೆ ಕರೆದಿದ್ದಾರೆ. ೬೨ ಶಾಸಕರ ಪೈಕಿ ೫೩ ಶಾಸಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ನಮ್ಮನ್ನು ಸಂಪರ್ಕಿಸಿದೆ ಎಂದು 12 ಶಾಸಕರು ತಿಳಿಸಿದ್ದಾರೆ. ಆದರೆ ಅವರು ಅರವಿಂದ್ ಕೇಜ್ರಿವಾಲ್ ಗೆ ಬೆಂಬಲ ನೀಡಲಿದ್ದು, ಬಿಜೆಪಿ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಆಪ್ ಮುಖಂಡ ಸೌರಭ್ ಭಾರಧ್ವಾಜ್ ತಿಳಿಸಿದ್ದಾರೆ.