ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಆ.29 ಮತ್ತು 30ರಂದು ವಿವಿಧ ಸ್ಥಳಗಳಿಗೆ 500 ವಿಶೇಷ ಬಸ್ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿರುವುದಲ್ಲದೆ ಎಂದು ಸಂಸ್ಥೆ ತಿಳಿಸಿದೆ.
ಈ ಹೆಚ್ಚುವರಿ ಬಸ್ಗಳು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಸಂಚರಿಸಲಿದ್ದು, ಹೊರ ರಾಜ್ಯಗಳಿಗೆ ನಿಗಮದಿಂದ ಹೆಚ್ಚುವರಿ ಬಸ್ ಬಿಡಲಾಗಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ಮಂಗಳೂರು, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ಇನ್ನಿತರೆ ಹೊರ ರಾಜ್ಯಗಳ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ನಡೆಸಲಿವೆ.

ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ಹಾಗೂ ಹೋಗಿ-ಬರುವ ಟಿಕೆಟ್ ಒಟ್ಟಿಗೆ ಬುಕ್ ಮಾಡಿದಲ್ಲಿ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಆರ್ಟಿಸಿ ತಿಳಿಸಿದೆ.