ಸರ್ಕಾರಿ ಕಾಲೇಜುಗಳಲ್ಲಿನ ಶಿಕ್ಷಕರ ವರ್ಗಾವಣೆಯನ್ನು ಪರಿಶೀಲಿಸಲು ರಾಜ್ಯ ಸರ್ಕಾರವು ಆನ್‌ಲೈನ್ ಪೋರ್ಟಲ್ ಪ್ರಾರಂಭಿಸಲು ನಿರ್ಧರಿಸಿದೆ ಎಂದು ಪಕ್ಷಿಮ ಬಂಗಾಳ ಶಿಕ್ಷಣ ಸಚಿವ ಬ್ರತ್ಯಾ ಬಸು ಶುಕ್ರವಾರ ಹೇಳಿದ್ದಾರೆ.
ಸಚಿವರ ಪ್ರಕಾರ, ಪ್ರಕ್ರಿಯೆ ಪ್ರಾರಂಭವಾದ ನಂತರ, ರಾಜ್ಯ ಅನುದಾನಿತ ಕಾಲೇಜುಗಳ ಶಿಕ್ಷಕರು ಉನ್ನತ ಶಿಕ್ಷಣ ಇಲಾಖೆ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ಬದಲು ಆನ್‌ಲೈನ್‌ನಲ್ಲಿ ತಮ್ಮ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು ಎಂದು ಹೇಳಿದ್ದಾರೆ.
ಭೌತಿಕ ಭೇಟಿಯು ಸಮಯ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ ಮತ್ತು ಖಾಲಿ ಹುದ್ದೆಗಳ ಬಗ್ಗೆ ತಿಳಿದುಕೊಳ್ಳುವುದು ಪ್ರಸ್ತುತ ವ್ಯವಸ್ಥೆಯಲ್ಲಿ ಕಷ್ಟ ಹಾಗಾಗಿ ಈ ವ್ಯವಸ್ಥೆ ಮಾಡಲಾಗಿದೆ ಎಂಧು ಹೇಳಿದ್ದಾರೆ.
“ಆನ್‌ಲೈನ್ ವ್ಯವಸ್ಥೆಯು ವರ್ಗಾವಣೆ ಬಯಸುತ್ತಿರುವ 450 ರಾಜ್ಯ ಅನುದಾನಿತ ಕಾಲೇಜುಗಳ ಶಿಕ್ಷಕರಿಗೆ ಸಹಾಯವಾಗಲಿದೆ. ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳಲು ನಾವು ಈ ವ್ಯವಸ್ಥೆಯನ್ನು ಪರಿಚಯಿಸುತ್ತಿದ್ದೇವೆ. ಯಾವುದೇ ಶಿಕ್ಷಕರು ಆನ್‌ಲೈನ್‌ನಲ್ಲಿ ಖಾಲಿ ಹುದ್ದೆಗಳನ್ನು ನೋಡಬಹುದು ಮತ್ತು ಪೋಸ್ಟಿಂಗ್‌ಗೆ ಅರ್ಜಿ ಸಲ್ಲಿಸಬಹುದು. ಅವರು ತಮ್ಮ ಆಯ್ಕೆಯ ಕಾಲೇಜನ್ನು ಆಯ್ಕೆ ಮಾಡಿಕೊಳ್ಳುವ ಮತ್ತು ಅದಕ್ಕೆ ಅನುಗುಣವಾಗಿ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ. ಇನ್ನೆರಡು-ಮೂರು ದಿನಗಳಲ್ಲಿ ಅಧಿಕೃತ ಘೋಷಣೆ ಮಾಡಲಿದ್ದೇವೆ’ ಎಂದು ಬಸು ಹೇಳಿದ್ದಾರೆ.