ಚಾಮರಾಜನಗರ ಜಿಲ್ಲಾದ್ಯಂತ ಬೆಳಗ್ಗೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾಯ ಜಿಲ್ಲೆಯಲ್ಲಿನ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ನಿನ್ನೆ ತಡರಾತ್ರೆಯಿಂದ ಶುರುವಾದ ಮಳೆ ಬೆಳಿಗ್ಗೆಯಾದರೂ ನಿಲ್ಲದೆ ಧಾರಾಕಾರವಾಗಿ ಸುರಿಯುತ್ರಿರುವ ಪರಿಣಾಮ ಅನೇಕ ಶಾಲೆಗಳ ಆವರಣದಲ್ಲಿ ಮಳೆ ನೀರು ನಿಂತಿದೆ. ಇನ್ನೂ ಕೆಲವೆಡೆ ರಸ್ತೆಯಲ್ಲಿ ನೀರು ನಿಂತಿದೆ. ಶಾಲೆಗೆ ಆಗಮಿಸಲು ಶಿಕ್ಷಕರು ಮತ್ತು ಮಕ್ಕಳು ಪರದಾಡುವ ಪರಿಸ್ಥಿತಿ ಸೃಷ್ಟಿಯಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿದ್ದಾರೆ.