ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೌಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ಬಂಧಿಸಲಾಗಿದೆ.
ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಈ ಪೋಕ್ಸೋ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಮುರುಘಾ ಶ್ರೀ ಅಜ್ಞಾತ ಸ್ಥಳಕ್ಕೆ ತೆರಳೋ ಹಿನ್ನಲೆಯಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಖಚಿತ ಮಾಹಿತಿಯನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ.