• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ: ಸಚಿವ ಎಸ್.ಟಿ.ಸೋಮಶೇಖರ್

Any Mind by Any Mind
August 29, 2022
in ಕರ್ನಾಟಕ
0
ಮಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ: ಸಚಿವ ಎಸ್.ಟಿ.ಸೋಮಶೇಖರ್
Share on WhatsAppShare on FacebookShare on Telegram

ಮಳೆಯಿಂದ ಜಿಲ್ಲೆಯಲ್ಲಿ ಆಗಿರುವ ಹಾನಿ ಕುರಿತು ಎಲ್ಲ ಅಧಿಕಾರಿಗಳ, ಶಾಸಕರ ಸಭೆ ಕರೆಯಲಾಗಿದೆ. ಯಾವ ಭಾಗದಲ್ಲಿ ಎಷ್ಟು ಹಾನಿ ಆಗಿದೆ? ಎಲ್ಲೆಲ್ಲಿ ಭೇಟಿ ಮಾಡಬೇಕು? ಏನಾಗಿದೆ ಎಂದು ಕೇಳಿದ್ದೇನೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ADVERTISEMENT

ಮೈಸೂರು ನಗರದಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳಿಗೂ ಮಾಹಿತಿ ನೀಡಲಾಗಿದೆ ಎಂದರು.

ಶಾಲೆಗಳಿಗೆ ರಜೆ ಕೊಟ್ಟಿದ್ದಾರೆ ಎನ್ನುವ ಕುರಿತು ಈಗ ತಾನೆ ಮಾಹಿತಿ ಲಭಿಸಿದೆ. ಆದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆ ಆರಂಭವಾದ ಮೇಲೆ ರಜೆ ಕೊಟ್ಟಿದ್ದರಿಂದ ತೊಂದರೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಳೆ ಹಾನಿ ಕುರಿತ ಸಭೆಯಲ್ಲಿ ಎಲ್ಲ ಚರ್ಚಿಸಲಾಗುವುದು ಎಂದರು.

ಮೈಸೂರು ದಸರಾ ಕುರಿತು ಪ್ರತಿಕ್ರಿಯಿಸಿ, ಹೈಪವರ್ ಕಮಿಟಿಯಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅದ್ಧೂರಿ ದಸರಾ ತೀರ್ಮಾನವಾಗಿರುವಂಥದ್ದು. ಈಗಾಗಲೇ ಸಮಿತಿ ರಚಿಸಿದ್ದೇವೆ. ಇಂದು ಮಧ್ಯಾಹ್ನ ಅದರ ಸಭೆ ಕೂಡ ಕರೆದಿದ್ದೇನೆ. ಮಳೆ ನಿಂತ ನಂತರ ದಸರಾ ಕೆಲಸ ಆರಂಭವಾಗಲಿದೆ ಎಂದರು.

ರಾಮನಗರ ಹೆದ್ದಾರಿ ಜಲಾವೃತ ಕುರಿತು ಪ್ರತಿಕ್ರಿಯಿಸಿ, ಹೆದ್ದಾರಿಗೆ ಸಂಬಂಧಿಸಿದ ಅಧಿಕಾರಿಗಳೆಲ್ಲರನ್ನೂ ಕರೆದು ಸಭೆ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ನಿನ್ನೆ ರಾಮನಗರ, ಮಂಡ್ಯ, ಮೈಸೂರು ವರ್ಚುವಲ್ ಮೂಲಕ ಚರ್ಚೆ ನಡೆಸಿದ್ದಾರೆ. ನಾಗಮಂಗಲ ಹೋಗುವ ರಸ್ತೆ ಮತ್ತೆ ಕನಕಪುರ ಹೋಗುವ ರಸ್ತೆಯಲ್ಲಿ ಬದಲಾವಣೆ ಮಾಡಬೇಕು. ಯಾಕೆಂದರೆ ಕೆರೆ ಕೋಡಿ ಎಲ್ಲ ನೀರು ತುಂಬಿದೆ. ಈ ಮಾರ್ಗವಾಗಿ ಮೈಸೂರಿಗೆ ಹೋಗುವುದನ್ನು ಆದಷ್ಟು ತಪ್ಪಿಸಬೇಕು ಎಂದು ಹೇಳಿದ್ದಾರೆ. ಎರಡು ದಿನದಲ್ಲಿ ಮಳೆ ಕಡಿಮೆಯಾದರೆ ರಸ್ತೆಯಲ್ಲಿ ಹೋಗಬಹುದು ಎಂದರು.

ಮೇಯರ್ ಚುನಾವಣೆ ಕುರಿತು ಪ್ರತಿಕ್ರಿಯಿಸಿ ನಮಗೆ ಏನೂ ಯಾವುದೇ ಸೂಚನೆ ಬಂದಿಲ್ಲ. ಪ್ರಧಾನಿ ಸೆಪ್ಟೆಂಬರ್ 2ರಂದು ಮಂಗಳೂರಿಗೆ ಬರುತ್ತಿರುವುದರಿಂದ ಪಕ್ಷದ ಅಧ್ಯಕ್ಷರು ನಮಗೆ ಏನೂ ಹೇಳಿಲ್ಲ. ಪ್ರಧಾನಿಯವರು ಬಂದು ಹೋದ ಮೇಲೆ ತಿಳಿಸುತ್ತಾರೆ. ಇನ್ನೂ ಸಮಯವಿದೆ ಎಂದು ತಿಳಿಸಿದರು.

ಕಾಂಗ್ರೆಸ್ ನವರ ಐಕ್ಯತೆ ನಡಿಗೆ ಕುರಿತು ಪ್ರತಿಕ್ರಿಯಿಸಿ, ಅವರದ್ದು ಏನು ಐಕ್ಯತೆ ನನಗೆ ಅರ್ಥವಾಗುತ್ತಿಲ್ಲ. ಪ್ರಧಾನಿಯವರು ಇಡೀ ವಿಶ್ವವೇ ಮೆಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದರು. ಮುರುಘಾ ಶ್ರೀಗಳ ಕುರಿತು ಸಿಎಂ, ಗೃಹಮಂತ್ರಿಗಳು ಪ್ರತಿಕ್ರಿಯೆ ಕೊಟ್ಟಿದ್ದಾರೆ. ನಾನೂ ಏನು ವರದಿ ಬರಬಹುದೆನ್ನುವ ಕಾತುರದಲ್ಲಿದ್ದೇನೆ. ತನಿಖೆ ಹೊರ ಬಂದ ನಂತರ ಎಲ್ಲವೂ ತಿಳಿಯಲಿದೆ ಎಂದರು.

ದಸರಾ ಉದ್ಘಾಟಕರ ಕುರಿತು ಪ್ರತಿಕ್ರಿಯಿಸಿ, ಈ ಕುರಿತು ಇನ್ನೂ ಚರ್ಚೆ ಆಗಿಲ್ಲ ಎಂದರು. ತಾಲೂಕುಗಳಲ್ಲಿ ಮನೆ ಬೀಳುವ ಕುರಿತು ಪ್ರತಿಕ್ರಿಯಿಸಿ, ಜಿಲ್ಲಾಧಿಕಾರಿಗಳ ಬಳಿ ಹಣ ಇದೆ. ಭಾಗಶಃ ಹಾನಿ ಆದವರಿಗೆ ತಕ್ಷಣ ಪರಿಹಾರ ಸಿಗಲಿದೆ ಎಮದು ತಿಳಿಸಿದರು.

Previous Post

ಬೆಂಗಳೂರು-ಮೈಸೂರು ಹೆದ್ದಾರಿ ಟ್ರಾಫಿಕ್‌ ಜಾಮ್:‌ ವಾಹನ ಸವಾರರ ಪರದಾಟ!

Next Post

ರಾಹುಲ್‌ ಒಳ್ಳೆಯ ವ್ಯಕ್ತಿ, ರಾಜಕಾರಣಕ್ಕೆ ಸೂಕ್ತ ಅಲ್ಲ: ಗುಲಾಮ್‌ ನಬಿ ಆಜಾದ್‌

Related Posts

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!
Top Story

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೆಪಿಎಸ್‌ಸಿ ವಿರುದ್ಧ ವ್ಯಕ್ತವಾಗುತ್ತಿವೆ. ಆದರೆ ಇದೀಗ ರಾಜ್ಯದ...

Read moreDetails
ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

ನೀರಿಲ್ಲದ ಕೃಷ್ಣೆಯ ಒಡಲು : ಜವಾಬ್ದಾರಿ ಮರೆತ ಜನಪ್ರತಿನಿಧಿಗಳು ; ರೈತರ ತೀವ್ರ ಆಕ್ರೋಶ..!

May 17, 2026
ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

ಜನದಟ್ಟಣೆಯೇ ಇವರ ಟಾರ್ಗೆ‌ಟ್ : ಬಂಗಾರದ ‌ ಆಭರಣಕ್ಕೆ ಕನ್ನ ಹಾಕಿದ್ದ ಅಂತಾರಾಜ್ಯ ಕಳ್ಳಿಯರ ಬಂಧನ..!

May 17, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
Next Post
ಗುಲಾಮ್‌ ನಬಿ ಆಜಾದ್‌ ಜಮ್ಮು ಕಾಶ್ಮೀರದ ಸ್ಥಾನಕ್ಕೆ ರಾಜೀನಾಮೆ

ರಾಹುಲ್‌ ಒಳ್ಳೆಯ ವ್ಯಕ್ತಿ, ರಾಜಕಾರಣಕ್ಕೆ ಸೂಕ್ತ ಅಲ್ಲ: ಗುಲಾಮ್‌ ನಬಿ ಆಜಾದ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada