ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿ ಮುರುಘಾ ಸ್ವಾಮೀಜಿ ಪರವಾಗಿ ನಿಂತ ಹಿರಿಯ ವಕೀಲರಾದ ಶಂಕರಪ್ಪರವರನ್ನು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸವಾದಿ) ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಮುರುಘಾ ಮಠದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಕ್ಕೆ ಸಂಬಂಧಿಸಿ, ಪಕ್ಷದ ಸದಸ್ಯರು ಹಾಗೂ ಹಿರಿಯ ವಕೀಲರಾದ ಶಂಕರಪ್ಪರವರು ಆರೋಪಿ ಪರ ನಿಂತುಕೊಂಡು ಪಕ್ಷದ ನಿಲುಮೆಗೆ ಹಾಗೂ ಧೋರಣೆಗೆ ವಿರುದ್ಧವಾಗಿ ನಡೆದುಕೊಂಡ ಕಾರಣದಿಂದ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸವಾದಿ) ಕರ್ನಾಟಕ ರಾಜ್ಯ ಸಮಿತಿಯು, ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಿದೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ನಿನ್ನೆ ರಾತ್ರಿ 10.30ರ ಸುಮಾರಿಗೆ ಬಂಧಿಸಲಾಗಿದೆ. ತಪಾಸಣೆಯ ನಂತರ ಜೈಲಿನಲ್ಲಿ ಇರಿಸಿ ಇಂದು ಶುಕ್ರವಾರ ಬೆಳಗ್ಗೆ ಎದೆ ನೀವು ಎಂದು ಕಾರಣವೊಡ್ಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.