ಪಾಕಿಸ್ತಾನದಲ್ಲಿ ಸಂಭವಿಸಿರುವ ಬೀಕರ ಪ್ರವಾಹ ಪರಿಸ್ಥಿತಿ ಕುರಿತು ಟ್ವೀಟ್ ಮಾಡಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಪಾಕಿಸ್ತಾನದಲ್ಲಿ ಸಂಭವಿಸಿರುವ ಪ್ರವಾಹ ಭೀಕರವಾಗಿದೆ ದುರಂತದಿಂದ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಪಾಕಿಸ್ತಾನದಲ್ಲಿ ಪ್ರವಾಹದಿಂದ ಉಂಟಾದ ಹಾನಿಯನ್ನು ನೋಡಿ ಬೇಸರವಾಯಿತು. ನೈಸರ್ಗಿಕ ವಿಕೋಪದಲ್ಲಿ ಗಾಯಗೊಂಡವರ ಮತ್ತು ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ.
ಪಾಕಿಸ್ತಾನ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿ ಪ್ರಕಾರ ಪ್ರವಾಹದಿಂದಾಗಿ ಇಲ್ಲಿಯವರೆಗೂ ಒಟ್ಟು 1,391 ಮಂದಿ ಮೃತಪಟ್ಟಿದ್ದು 12,000 ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.