ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟ್ವಿಟರ್ ನಲ್ಲಿ 50 ದಶಲಕ್ಷ ಫಾಲೋವರ್ಸ್ ಪಡೆದ ಮೊದಲ ಕ್ರಿಕೆಟಿಗ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಭಾರತದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದ ಯಾವುದೇ ಕ್ರೀಡಾಪಟುಗಳಿಗೆ ಕಡಿಮೆ ಇಲ್ಲದಂತಹ ಅಭಿಮಾನಿಗಳನ್ನು ಹೊಂದಿರುವ ವಿರಾಟ್ ಕೊಹ್ಲಿ ಟ್ವಿಟರ್ ನಲ್ಲಿ 50 ದಶಲಕ್ಷ ಫಾಲೋವರ್ಸ್ ಗಡಿ ದಾಟಿ ಹೊಸ ಸಾಧನೆ ಮಾಡಿದ್ದಾರೆ.

33 ವರ್ಷದ ವಿರಾಟ್ ಕೊಹ್ಲಿ ಈಗಾಗಲೇ ಇನ್ ಸ್ಟಾಗ್ರಾಂನಲ್ಲಿ 211 ದಶಲಕ್ಷ ಫಾಲೋವರ್ಸ್ ಹೊಂದಿದ್ದು, ವಿಶ್ವದಲ್ಲೇ ಅತೀ ಹೆಚ್ಚು ಫಾಲೋವರ್ಸ್ ಹೊಂದಿದ ಮೂರನೇ ಕ್ರೀಡಾಪಟು ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಫುಟ್ಬಾಲ್ ಸ್ಟಾರ್ ಕ್ರಿಸ್ಟಿಯಾನೊ ರೊನಾಲ್ಡೊ (450 ದಶಲಕ್ಷ) ಹಾಗೂ ಅರ್ಜೆಂಟೀನಾದ ಲಿಯೊನೆಲ್ ಮೆಸ್ಸಿ (333 ದಶಲಕ್ಷ) ಮೊದಲೆರಡು ಸ್ಥಾನಗಳಲ್ಲಿದ್ದಾರೆ. ಕೊಹ್ಲಿಗೆ ಒಟ್ಟಾರೆ ಸಾಮಾಜಿಕ ಜಾಲತಾಣದಲ್ಲಿ 310 ದಶಲಕ್ಷ ಫಾಲೋವರ್ಸ್ ಹೊಂದಿದಂತಾಗಿದೆ.
ಏಷ್ಯಾಕಪ್ ನಲ್ಲಿ ಆಫ್ಘಾನಿಸ್ತಾನ ವಿರುದ್ಧ ಶತಕ ಸಿಡಿಸುವ ಮೂಲಕ ಶತಕಗಳ ಬರ ನೀಗಿಸಿಕೊಂಡಿದ್ದಾರೆ. ಅಲ್ಲದೇ ಮೂರು ವರ್ಷಗಳ ನಂತರ ಕೊಹ್ಲಿ ಮತ್ತೆ ಶತಕ ಗಳಿಸಿದ್ದಾರೆ.






