• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾಳೆ ಸದನದಲ್ಲಿ ಹಗರಣ ಬಯಲಿಗೆ: ಎಚ್‌.ಡಿ. ಕುಮಾರಸ್ವಾಮಿ

Any Mind by Any Mind
September 19, 2022
in ಕರ್ನಾಟಕ
0
ಬಿಜೆಪಿಯ ನಾಯಕನಿಗೂ ಪರೀಕ್ಷೆ ಅಕ್ರಮದ ಕಿಂಗ್‌ಪಿನ್‌ ಗೂ ಸಂಪರ್ಕ: ಎಚ್.ಡಿ. ಕುಮಾರಸ್ವಾಮಿ ಬಾಂಬ್
Share on WhatsAppShare on FacebookShare on Telegram

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರದ ಮೂಲ ಸೌಕರ್ಯಗಳಿಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಅಡ್ಡಿಪಡಿಸಿದ್ದೇನೆ ಎಂಬ ಬಗ್ಗೆ ಒಂದು ಪ್ರಕರಣವನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಇದ್ದಕ್ಕಿದ್ದ ಹಾಗೆ ಒತ್ತುವರಿ ತೆರವಿನ ಡ್ರಾಮಾ ನಡೆಯುತ್ತಿದೆ. ನಾನು ಈಗಾಗಲೇ ಕಲಾಪದಲ್ಲಿ ಹೇಳಿದ್ದೇನೆ. ಯುದ್ಧ ಕಾಲದಲ್ಲಿ ಶಸ್ತ್ರಾಸ್ತ್ರ ಅಭ್ಯಾಸ ಮಾಡುವ ಬದಲಾಗಿ, ನಾಲ್ಕೈದು ಕಡೆದ ತೆರವು ಮಾಡಿ ಸುಮ್ಮನಾಗುವುದಲ್ಲ. ಕಳೆದ 25 ವರ್ಷಗಳಿಂದ ಆದ ಅನಾಹುತಗಳು ಸೇರಿ ಕಳೆದ ಕಳೆದ ಐದು ವರ್ಷಗಳಿಂದ ನಗರದಲ್ಲಿ ಆಗಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸರಕಾರವನ್ನು ಒತ್ತಾಯ ಮಾಡಿದರು.

ಜೆಡಿಎಸ್ ಕಾಲದಲ್ಲಿ ಆಗಿರುವ ನಿರ್ಧಾರಗಳಿಂದ ಲೋಪ ಆಗಿದೆ ಎಂದು ಕೆಲವರು ಆರೋಪ ಮಾಡಿದ್ದಾರೆ. ನಾನು ಅಧಿಕಾರದಲ್ಲಿ ಇದ್ದಾಗ ಏನಾದರೂ ಲೋಪ ಆಗಿದ್ದರೆ, ಆರೋಪ ಮಾಡಿರುವ ಕಾಂಗ್ರೆಸ್ ಮತ್ತು ಬಿಜೆಪಿ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಘೋಷಣೆ ಮಾಡ್ತೀನಿ. ನಾನು ಬೆಂಗಳೂರು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ತೀಕ್ಷ್ಣವಾಗಿ ಹೇಳಿದರು.

ಸದನದಲ್ಲಿ ನಾಳೆ ಹಗರಣ ಬಯಲಿಗೆ!

ಹರಗಣವೊಂದನ್ನು ಬಯಲಿಗೆ ತರುವ ಬಗ್ಗೆ ಸದನದಲ್ಲಿ ಮಾತನಾಡಲು ಅವಕಾಶ ಕೊಡಬೇಕು ಈಗಾಗಲೇ ಸಭಾದ್ಯಕ್ಷರಿಗೆ ಮನವಿ ಮಾಡಿದ್ದೇನೆ. ಆದರೆ, ಸುಖಾಸುಮ್ಮನೆ ಮಾತನಾಡಿ ಸದನದಲ್ಲಿ ನ್ಯೂಸೆನ್ಸ್  ಮಾಡೋಕೆ ನನಗೆ ಇಷ್ಟವಿಲ್ಲ. ಇಂದು ಬೆಳಗ್ಗೆ ಕೂಡ ಸಭಾಧ್ಯಕ್ಷರಿಗೆ ದೂರವಾಣಿ ಕರೆ ಮಾಡಿ ಮತ್ತೊಮ್ಮೆ ಮನವಿ ಮಾಡಿದ್ದೇನೆ. ಬೇರೆ ಬೇರೆ ವಿಚಾರಗಳ ಚರ್ಚೆಗೆ ಅವಕಾಶ ನೀಡಲಾಗಿದ್ದ ಕಾರಣದಿಂದ ತಡವಾಗಿ ಅವಕಾಶ ನೀಡುವುದಾಗಿ ತಿಳಿಸಿದ್ದಾರೆ. ಬಹುಶಃ ನಾಳೆ (ಮಂಗಳವಾರ) ಅವಕಾಶ ಸಿಗಬಹುದು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಸದನದಲ್ಲಿ ನಾನು ಪ್ರಸ್ತಾಪ ಮಾಡಲಿರುವ ವಿಷಯ ಅತ್ಯಂತ ಗಂಭೀರ ವಿಚಾರ. ಪೂರ್ಣವಾಗಿ ದಾಖಲೆಗಳನ್ನು ಇಟ್ಟುಕೊಂಡೇ ಮಾತನಾಡುತ್ತೇನೆ. ಗಾಳಿಯಲ್ಲಿ ಗುಂಡು ಹಾರಿಸೋನು, ಕುಮಾರಸ್ವಾಮಿ ಹಿಟ್ ಆಂಡ್ ರನ್ ಮಾಡ್ತಾರೆ ಎಂದು ಹೇಳುವವರಿಗೆ ಉತ್ತರ ಕೊಡುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ಸಾವಿರಾರು ಕೋಟಿ ವ್ಯವಹಾರಕ್ಕೆ ಸಂಬಂಧಪಟ್ಟ ವಿಷಯ ಅದು. ಈ ಒಂದು ವಿಷಯದಲ್ಲಿ ಸರ್ಕಾರ ಆಘಾತಕಾರಿ ತೀರ್ಮಾನ ತೆಗೆದುಕೊಂಡಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎಸ್.ಟಿ.ಸೋಮಶೇಖರ್ ರಾಜೀನಾಮೆ ನೀಡಲಿ:

ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳಿತು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇದೇ ವೇಳೆ ಹೇಳಿದರು.

ಬಿಡಿಎ ವಸತಿ ಯೋಜನೆಯಿಂದಕ್ಕೆ ಸಂಬಂಧಿಸಿ ಲಂಚದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಸಚಿವರ ವಿರುದ್ಧ ಆರೋಪ ಪಟ್ಟಿ (ಎಫ್ ಐ ಅರ್ ) ದಾಖಲು ಮಾಡಿದ್ದಾರೆ. ಅಲ್ಲದೆ, ಇದರ ತನಿಖೆಗೆ ಹೈಕೋರ್ಟ್ ಸೂಚನೆ ಕೊಟ್ಟಿದೆ ಎಂದು ಅವರು ಹೇಳಿದರು.

ನೈತಿಕ ಹೊಣೆ ಹೊತ್ತು ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. FIR ಮೇಲೆ ತನಿಖೆ ಪ್ರಾರಂಭ ಮಾಡುವುದಾದರೇ, ಸೋಮಶೇಖರ್ ಅವರು ಹಾಲಿ ಮಂತ್ರಿ. ಅವರು ಬಿಡಿಎ ಅಧ್ಯಕ್ಷರಾಗಿದ್ದಾಗ ತೆಗೆದುಕೊಂಡಿರುವ ನಿರ್ಧಾರದ ವಿರುದ್ಧ ಈಗ ಎಫ್ ಐ ಅರ್ ದಾಖಲಾಗಿದೆ. ಸಚಿವರು ಪ್ರಭಾವೀ ಸ್ಥಾನದಲ್ಲಿ ಇರುವುದರಿಂದ ಸತ್ಯಾಸತ್ಯತೆಗಳನ್ನು ಮರೆ ಮಾಚುವುದಕ್ಕೆ ಅವಕಾಶಗಳು ಇರುತ್ತವೆ. ಈ ಹಿನ್ನೆಲೆಯಲ್ಲಿ ಸಚಿವರು ರಾಜೀನಾಮೆ ನೀಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಇಡಿ ನೋಟಿಸ್ ಗೆ ಉತ್ತರ ಕೊಡುವ ಶಕ್ತಿ ಡಿಕೆಶಿಗೆ ಇದೆ:

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ತನಿಖೆ ವಿಚಾರದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಕುಮಾರಸ್ವಾಮಿ ಅವರು, ಡಿಕೆ ಶಿವಕುಮಾರ್ ಅವರು ತಾವೊಬ್ಬ ರಾಜಕಾರಣಿ, ರೈತ, ಬ್ಯುಸಿನೆಸ್‌ಮನ್, ನನ್ನದೇ ಆದಂತಹ ವೃತಿಗಳಿವೆ. ನಾನು ಭ್ರಷ್ಟಾಚಾರ ಮಾಡಿಲ್ಲ ಎಂದು ಸ್ವತಃ ಹೇಳಿಕೊಂಡಿದ್ದಾರೆ ಎಂದರು.

ಅವರು ಭ್ರಷ್ಟಾಚಾರ ಮಾಡದೆ ಇದ್ದಲ್ಲಿ ಇಡಿ ನೋಟಿಸ್ ಕೊಟ್ಟಿದ್ದರೂ ಅದಕ್ಕೆ ಅವರು ಉತ್ತರ ಕೊಡುವ ಸಾಮರ್ಥ್ಯ ಹೊಂದಿದ್ದಾರೆ. ಅದರಿಂದ ಹೊರಗೆ ಬರುವ ವಿಶ್ವಾಸ ಅವರಿಗೆ ಇದ್ದಾಗ ನಾನು ಅದರ ಬಗ್ಗೆ ಟೀಕೆ ಮಾಡೋಕೆ ಹೋಗಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

Previous Post

ಪಾಕಿಸ್ತಾನದಲ್ಲಿ ಮತ್ತೆ ಪ್ರವಾಹ ಭೀತಿ!

Next Post

Zoom ಆಪ್‌ ನಲ್ಲಿ ಲೋಪ, ಕೂಡಲೇ ಅಪ್‌ ಡೇಟ್‌ ಮಾಡಲು ಕೇಂದ್ರ ಸೂಚನೆ!

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
Zoom ಆಪ್‌ ನಲ್ಲಿ ಲೋಪ, ಕೂಡಲೇ ಅಪ್‌ ಡೇಟ್‌ ಮಾಡಲು ಕೇಂದ್ರ ಸೂಚನೆ!

Zoom ಆಪ್‌ ನಲ್ಲಿ ಲೋಪ, ಕೂಡಲೇ ಅಪ್‌ ಡೇಟ್‌ ಮಾಡಲು ಕೇಂದ್ರ ಸೂಚನೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada