ಅಪಾರ್ಟ್ ಮೆಂಟ್ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾಮಗಾರಿ ಮೃತಪಟ್ಟ ಘಟನೆ ನೋಯ್ಡಾದಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದೆ.
ನೋಯ್ಡಾದ ಸೆಕ್ಟರ್ ೨೧ರಂದು ವಸತಿ ಸಂಕೀರ್ಣ ಜಲ್ ವಾಯು ವಿಹಾರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ೧೨ ಮಂದಿ ಅವಶೇಷಗಳಡಿ ಸಿಲುಕಿದ್ದು, ಬುಲ್ಡೋಜರ್ ಮೂಲಕ ರಕ್ಷಣಾ ಕಾರ್ಯ ನಡೆದಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ತೆರಳಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಗೋಡೆಯ ಇಟ್ಟಿಗೆಗಳನ್ನು ತೆಗೆಯುವಂತೆ ಕಾರ್ಮಿಕರಿಗೆ ಸೂಚಿಸಲಾಗಿತ್ತು. ಇಟ್ಟಿಗೆಗಳನ್ನು ತೆಗೆಯುವಾಗ ಈ ದುರಂತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.