ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಗೆ ಅಪಾಯವಿದೆ ಎಂದು ಗುಪ್ತಚರ ಇಲಾಖೆ ಮುನ್ಸೂಚನೆ ಹಿನ್ನೆಲೆಯಲ್ಲಿ ಅವರಿಗೆ ನೀಡಲಾಗುತ್ತಿರುವ ಭದ್ರತೆಯನ್ನು Z+ ಗೆ ಹೆಚ್ಚಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯ ಗುಪ್ತಚರ ಮಾಹಿತಿ ಆಧರಿಸಿ ಈ ಹಿಂದೆ ನೀಡಲಾಗಿದ್ದ ಝೆಡ್ ಭದ್ರತೆಯನ್ನು ಹೆಚ್ಚಿಸಲಾಗಿದೆ.
ರಿಲಾಯನ್ಸ್ ಕಂಪನಿ ಮುಖ್ಯಸ್ಥರಾದ ಮುಖೇಶ್ ಅಂಬಾನಿ ಈ ಹಿಂದೆ ಮುಂಬೈನ ನಿವಾಸದ ಬಳಿ ಅಪರಿಚಿತ ವಾಹನ ಪತ್ತೆಯಾದ ಹಿನ್ನೆಲೆಯಲ್ಲಿ ಝೆಡ್ ಭದ್ರತೆ ನೀಡಲಾಗಿತ್ತು. ಆದರೆ ಇದೀಗ ಈ ಭದ್ರತೆಯನ್ನು ಹೆಚ್ಚಿಸಲಾಗಿದೆ.