• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ತನ್ನ ಸನಾತನ ಸುಳ್ಳು ಪಾಂಡಿತ್ಯಕ್ಕೆ ಮೊರೆ ಹೋಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
October 3, 2022
in ಕರ್ನಾಟಕ, ರಾಜಕೀಯ
0
ಬಿಜೆಪಿ ತನ್ನ ಸನಾತನ ಸುಳ್ಳು ಪಾಂಡಿತ್ಯಕ್ಕೆ ಮೊರೆ ಹೋಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಭಾರತ್ ಜೋಡೋ ಯಾತ್ರೆಯ ಯಶಸ್ಸು ಮತ್ತು ಇದಕ್ಕೆ ಸಿಗುತ್ತಿರುವ ಜನ ಮನ್ನಣೆಯ ಗಮನವನ್ನು ಮತ್ತೆ ಬೇರೆಡೆಗೆ ಸೆಳೆಯಲು ಬಿಜೆಪಿ ತನ್ನ ಸಾಂಪ್ರದಾಯಿಕವಾದ ಸನಾತನ ಸುಳ್ಳು ಪಾಂಡಿತ್ಯಕ್ಕೆ ಮೊರೆ ಹೋಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ADVERTISEMENT

ತಮಗೆ ವಹಿಸಿದ ಖಾತೆಯನ್ನು ಸಮರ್ಥವಾಗಿ ನಿರ್ವಹಿಸಲಾಗದೆ ನಾಡಿನ ಜನರನ್ನು ಮಳೆ-ಪ್ರವಾಹದ ಪ್ರಪಾತದಲ್ಲಿ ಮುಳುಗಿಸಿದ ಸಚಿವ ಆರ್.ಅಶೋಕ್ ಅವರ ಬಾಯಲ್ಲಿ ಹಳೆ ಸುಳ್ಳನ್ನು ಹೊಸದಾಗಿ ಹೇಳಿಸಿದೆ ಎಂದು ಟೀಕಿಸಿದ್ದಾರೆ.

ನಮ್ಮ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪಿಎಫ್ಐ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಆರೋಪದ ಬಗ್ಗೆ ನಾನೇ ನಾಲ್ಕು ಬಾರಿ ಸರ್ಕಾರಕ್ಕೆ ಪತ್ರ ಬರೆದು, ನಮ್ಮ ಸರ್ಕಾರದ ಅವಧಿಯಲ್ಲಿ ಯಾವ ಪಿಎಫ್ಐ ಕಾರ್ಯಕರ್ತರ ವಿರುದ್ಧದ ಪ್ರಕರಣವನ್ನು ಹಿಂದಕ್ಕೆ ಪಡೆಯಲಾಗಿತ್ತು ಎನ್ನುವ ಬಗ್ಗೆ ಬಿಜೆಪಿ ಸರ್ಕಾರಕ್ಕೆ ಉತ್ತರ ಕೇಳಿದ್ದೆ.

ಆದರೆ, ನನಗೆ ಬಿಜೆಪಿ ಸರ್ಕಾರವೇ ಕೊಟ್ಟಿರುವ ಉತ್ತರದಲ್ಲಿ ಎಲ್ಲೂ ಪಿಎಫ್ಐ ಮೇಲಿನ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವ ಉಲ್ಲೇಖಗಳೇ ಇಲ್ಲ. ಇದನ್ನೇ ನಾನು ನಾಲ್ಕು ದಿನಗಳ ಹಿಂದೆ ಬಿಡುಗಡೆ ಮಾಡಿದ್ದ ಪತ್ರಿಕಾ ಹೇಳಿಕೆಯಲ್ಲೂ ತಿಳಿಸಿದ್ದೆ ಎಂದಿದ್ದಾರೆ.

ಆ ಹೇಳಿಕೆಯಲ್ಲೇ ನಾನು ಶಿವಮೊಗ್ಗ, ಹಾಸನದಲ್ಲಿ “ಫರ್ದಾ ಏ ಫರ್ದಾ” ಲೇಖನ ವಿರೋಧಿಸಿ ನಡೆದಿದ್ದ ಪ್ರತಿಭಟನೆಗಳನ್ನೂ ಉಲ್ಲೇಖಿಸಿ ಈ ಪ್ರಕರಣಗಳನ್ನು ಹಿಂದಕ್ಕೆ ಪಡೆಯಲಾಗಿದ್ದನ್ನು ಹೇಳಿದ್ದೆ. ಈ ಪ್ರಕರಣಗಳಲ್ಲಿ ಪಿಎಫ್ಐ ಕಾರ್ಯಕರ್ತರು ಇದ್ದರು ಎನ್ನುವ ಬಗ್ಗೆ ಬಿಜೆಪಿ ಸರ್ಕಾರವೇ ನನಗೆ ಕೊಟ್ಟ ಉತ್ತರದಲ್ಲಿ ಉಲ್ಲೇಖಗಳಿಲ್ಲ.

ಬಿಜೆಪಿ ಸರ್ಕಾರ ನನಗೆ ನೀಡಿರುವ ಉತ್ತರದಲ್ಲಿ ನಮ್ಮ ಸರ್ಕಾರ ರೈತರು, ಕಾರ್ಮಿಕರು, ಪೌರ ಕಾರ್ಮಿಕರು, ಕಬ್ಬು ಬೆಳೆಗಾರರು, ಕಮ್ಮುನಿಸ್ಟ್ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವ ಬಗ್ಗೆ ಉಲ್ಲೇಖಗಳಿವೆ.

ಯಾವುದೇ ಪ್ರಕರಣದಲ್ಲಿ ಬಂಧಿತರಾದ ಆರೋಪಿಗಳು ಒಂದೇ ಸಮುದಾಯಕ್ಕೆ, ಒಂದೇ ಕೋಮಿಗೆ ಸೇರಿದವರು ಎನ್ನುವ ಒಂದೇ ಕಾರಣದಿಂದ ಎಲ್ಲರನ್ನೂ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಎಂದು ಬಿಂಬಿಸುವುದು, ಪಿಎಫ್ಐಗೂ ತಮಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ಆರೋಪಿಗಳನ್ನೂ ಪಿಎಫ್ಐ ಸಂಘಟನೆಗೆ ಜಮೆ ಮಾಡುವ ಷಡ್ಯಂತ್ರಕ್ಕೆ ಸಚಿವ ಆರ್.ಅಶೋಕ್ ಅವರನ್ನು ಬಿಜೆಪಿ ಮುಂದೆ ಬಿಟ್ಟಿದೆ ಎಂದು ಕಿಡಿಕಾರಿದ್ದಾರೆ.

ಸಚಿವ ಆರ್.ಅಶೋಕ್ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿರುವ ಆರೋಪಿಗಳು ಪಿಎಫ್ಐ ಕಾರ್ಯಕರ್ತರಾಗಿದ್ದರು ಎನ್ನುವುದಕ್ಕೆ ಯಾವುದೇ ದಾಖಲೆಗಳನ್ನು ಒದಗಿಸಿಲ್ಲ. ಪಿಎಫ್ಐ ಸದಸ್ಯತ್ವದ ದಾಖಲೆಗಳನ್ನೂ ನೀಡಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಸರ್ಕಾರ ನನಗೆ ಕೊಟ್ಟಿರುವ ಉತ್ತರದಲ್ಲಿ ಇವುಗಳ ಪ್ರಸ್ತಾಪವೇ ಇಲ್ಲ ಎಂದಿದ್ದಾರೆ.

ತನ್ನ ತಟ್ಟೆಯಲ್ಲಿರುವ ಸತ್ತ ಹಗ್ಗೆಣವನ್ನು ಪಕ್ಕದವರ ತಟ್ಟೆಗೆ ಬಿಸಾಡುವ ಪಾಂಡಿತ್ಯವನ್ನು ಬಿಜೆಪಿ ಪ್ರದರ್ಶಿಸಿದೆ. ಇದಕ್ಕೆ ಬಿಜೆಪಿ ಶಾಸಕ ಬಸವಗೌಡ ಯತ್ನಾಳ್ ಅವರ ಹೇಳಿಕೆಯೇ ಸಾಕ್ಷಿ. “ಪಿಎಫ್ಐ ಕಾಂಗ್ರೆಸ್ ನ ಓಟಿನ ಬ್ಯಾಂಕನ್ನು ಛಿದ್ರ ಮಾಡುತ್ತಿತ್ತು” ಎಂದು ಯತ್ನಾಳ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸತ್ಯ ತಾನೇ? ಎಂದು ಪ್ರಶ್ನಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಬಲ್ ಇಂಜಿನ್ ಸರ್ಕಾರ ಕೆಟ್ಟು ನಿಂತು ಸಾಕಷ್ಟು ದಿನಗಳಾಗಿವೆ : ಪ್ರಿಯಾಂಕ ಖರ್ಗೆ

Next Post

ಭಾರತ್‌ ಜೋಡೋ ಪಾದಯಾತ್ರೆ; 10 ಪ್ರಶ್ನೆ ಮುಂದಿಟ್ಟ ಬಿಜೆಪಿ

Related Posts

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?
ರಾಜಕೀಯ

ವಿನಯ್ ಕುಲಕರ್ಣಿಗೆ ಜೀವಾವಧಿ  ಶಿಕ್ಷೆ :ಜೀವನಪೂರ್ತಿ ಜೈಲಲ್ಲೇ ಇರಬೇಕಾ? ನಿಯಮ‌ ಏನಿದೆ ?

by ಪ್ರತಿಧ್ವನಿ
April 18, 2026
0

ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
Next Post
ಭಾರತ್‌ ಜೋಡೋ ಪಾದಯಾತ್ರೆ; 10 ಪ್ರಶ್ನೆ ಮುಂದಿಟ್ಟ ಬಿಜೆಪಿ

ಭಾರತ್‌ ಜೋಡೋ ಪಾದಯಾತ್ರೆ; 10 ಪ್ರಶ್ನೆ ಮುಂದಿಟ್ಟ ಬಿಜೆಪಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada