ಪೃಥ್ವಿ ಅಂಬರ್, ಮಿಲನಾ ನಾಗರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಆಡಿಯೋ ಹಕ್ಕು ಭಾರೀ ಮೊತ್ತಕ್ಕೆ ಮಾರಾಟವಾಗುವ ಮೂಲಕ ಸುದ್ದಿಯಲ್ಲಿದೆ.
ಚಿತ್ರದ ಆಡಿಯೋ ಹಕ್ಕನ್ನು ಪ್ರತಿಷ್ಟಿತ ಜಂಕಾರ್ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತ ನೀಡಿ ಖರೀದಿಸಿದೆ. ಆರ್.ಕೆ.ಹರೀಶ್ ಸಂಗೀತ ಸಂಯೋಜಿಸಿರುವ ಆರು ಹಾಡಿಗಳಿಗೆ ಬಹದ್ದೂರ್ ಚೇತನ್. ಕವಿರಾಜ್ ಅರಸ್ ಹಾಗೂ ನಾಗರ್ಜುನ ಶರ್ಮ ಸಾಹಿತ್ಯ ಬರೆದಿದ್ದಾರೆ.
ವಿಜಯ್ ಪ್ರಕಾಶ್, ಚಂದನ್ ಶೆಟ್ಟಿ, ವಾಸುಕಿ ವೈಭವ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇನ್ನೊಂದು ಹಾಇಡನ ಚಿತ್ರೀಕರಣ ಬಾಕಿ ಉಳಿಸಿಕೊಂಡಿದೆ.

ಬಿಡುಗಡೆಗೂ ಮುನ್ನ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ ಫಾರ್ ರಿಜಿಸ್ಟ್ರೇಷನ್ ಚಿತ್ರದಲ್ಲಿ ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ತಾರಾಬಳಗದಲ್ಲಿದ್ದಾರೆ.
ನಿವೀನ್ ದ್ವಾರಕನಾಥ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ನಿಶ್ಚಲ್ ಫಿಲಂಸ್ ಮೂಲಕ ಎನ್ .ನವೀನ್ ರಾವ್ ಬಂಡವಾಳ ಹೂಡುತ್ತಿದ್ದಾರೆ. ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನ ಈ ಚಿತ್ರಕ್ಕಿದೆ.