ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪಕ್ಷದ 20 ಶಾಸಕರ ಜೊತೆ ಹೈದ್ರಾಬಾದ್‌ಗೆ ಪ್ರಯಾಣ ಬೆಳೆಸಿದ್ದಾರೆ.
ಬುಧವಾರ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ನೂತನ ಪಕ್ಷ ಸ್ಥಾಪನೆ ಘೋಷಣೆ ಮಾಡಲಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗಲು ಕುಮಾರಸ್ವಾಮಿ ಹೈದರಬಾದಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ನೂತನ ರಾಷ್ಟ್ರೀಯ ಪಕ್ಷ ಸ್ಥಾಪನೆ ಕುರಿತು ಕಳೆದ ಕೆಲವು ತಿಂಗಳುಗಳ ಹಿಂದೆ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜತೆ ಚರ್ಚೆ ನಡೆಸಿದ್ದ ಕೆಸಿಆರ್. ಕೆಲ ತಿಂಗಳ ಹಿಂದೆಯಷ್ಟೇ ರಾಷ್ಟ್ರೀಯ ಪಕ್ಷ ಸ್ಥಾಪನೆ ಕುರಿತು ಹೈದ್ರಾಬಾದ್ ಗೆ ತೆರಳಿ ಕೆಸಿಆರ್ ಜತೆ ಚರ್ಚೆ ನಡೆಸಿದ್ದ ಹೆಚ್ ಡಿಕೆ.







