ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಿಸುವ ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್ ಪ್ರೆಸ್ ಎಂದು ರೈಲ್ವೆ ಇಲಾಖೆ ಮರುನಾಮಕರಣ ಮಾಡಿದೆ.
ಮೈಸೂರು ಮತ್ತು ಕೊಡಗು ಸಂಸದ ಪ್ರತಾಪ್ ಸಿಂಹ ಕೇಂದ್ರ ರೈಲ್ವೆ ಸಚಿವರಿಗೆ ಮಾಡಿದ ಮನವಿ ಹಿನ್ನೆಲೆಯಲ್ಲಿ ಟಿಪ್ಪು ಎಕ್ಸ್ ಪ್ರೆಸ್ ರೈಲಿನ ಹೆಸರನ್ನು ಒಡೆಯರ್ ಎಕ್ಸ್ ಪ್ರೆಸ್ ಎಂದು ಬದಸಿ ಆದೇಶ ಹೊರಡಿಸಲಾಗಿದೆ.

ಇದೇ ವೇಳೆ ಮೈಸೂರು-ತಾಳಗುಪ್ಪ ಎಕ್ಸ್ ಪ್ರೆಸ್ ಹೆಸರು ಸಹ ಬದಲಾವಣೆ ಮಾಡಲಾಗಿದ್ದು, ಕುವೆಂಪು ಎಕ್ಸ್ ಪ್ರೆಸ್ ಎಂದು ಮರು ನಾಮಕರಣ ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಜುಲೈ 25ರಂದು ಸಂಸದ ಪ್ರತಾಪ್ ಸಿಂಹ ಪತ್ರ ಬರೆದಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮನವಿಗೆ ಸ್ಪಂದಿಸಿ ಈ ಆದೇಶ ಹೊರಡಿಸಿದ್ದಾರೆ.