• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬನಾರಸ್ ಚಿತ್ರದ ವಿತರಣಾ ಹಕ್ಕು ಪಡೆದ ಡಿ ಬೀಟ್ಸ್ !

Any Mind by Any Mind
October 7, 2022
in ಸಿನಿಮಾ
0
ಬನಾರಸ್ ಚಿತ್ರದ ವಿತರಣಾ ಹಕ್ಕು ಪಡೆದ ಡಿ ಬೀಟ್ಸ್ !
Share on WhatsAppShare on FacebookShare on Telegram

ಬನಾರಸ್ ಚಿತ್ರದ ಕಡೆಯಿಂದ ಒಂದರ ಹಿಂದೊಂದರಂತೆ ಖುಷಿಯ ಸಂಗತಿಗಳು ಹೊರ ಬೀಳುತ್ತಿವೆ. ಹೊಸತನಗಳಿಂದಲೇ ಮೈ ಕೈ ತುಂಬಿಕೊಂಡಿರುವ ಚಿತ್ರವೊಂದು ಹೆಜ್ಜೆ ಹೆಜ್ಜೆಗೂ ದಾಖಲೆ ಬರೆಯುತ್ತಾ ಮುಂದುವರೆಯುತ್ತೆ. ಸದ್ಯ ಬನಾರಸ್ ಚಿತ್ರದ ನಡೆ ಆ ಮಾತಿಗೆ ಅನ್ವರ್ಥ ಎಂಬಂತಿದೆ.

ADVERTISEMENT

ಒಂದು ಕಡೆಯಿಂದ ತಂಗಾಳಿಯಂತೆ ತೇಲಿ ಬಂದು ಎಲ್ಲರ ಮನಸೋಕಿ ಮುದಗೊಳಿಸಿರುವ ಮಾಯಗಂಗೆ, ಮತ್ತೊಂದೆಡೆ ವಾರದ ಹಿಂದಷ್ಟೇ ಬಿಡುಗಡೆಗೊಂಡು ಮಿಲಿಯನ್ನುಗಟ್ಟಲೆ ವೀವ್ಸ್ ಪಡೆದು ಪ್ರಸಿದ್ಧಿ ಪಡೆದುಕೊಂಡಿರುವ ಟ್ರೈಲರ್… ಇದೆಲ್ಲದರಿಂದಾಗಿ ನಿಗಿ ನಿಗಿಸೋ ನಿರೀಕ್ಷೆ ಮೂಡಿಸಿರುವ ಬಾನಾರಸ್ ದಿಕ್ಕಿನಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಈ ಸಿನಿಮಾದ ವಿಶಾಲ ಕರ್ನಾಟಕ ವಿತರಣಾ ಹಕ್ಕನ್ನು ಖ್ಯಾತ ವಿತರಣಾ ಸಂಸ್ಥೆ ಡಿ ಬೀಟ್ಸ್ ಪಡೆದುಕೊಂಡಿದೆ.

ಶೈಲಜಾ ನಾಗ್ ಮತ್ತು ಬಿ ಸುರೇಶ್ ಸಾರಥ್ಯದ ಡಿ ಬೀಟ್ಸ್ ಎಂಥಾ ಗುಣಮಟ್ಟವನ್ನು ಕಾಯ್ದುಕೊಂಡಿರುವ ಚಿತ್ರವೆಂಬುದು ಎಲ್ಲರಿಗೂ ಗೊತ್ತಿದೆ. ಈ ಸಂಸ್ಥೆಯಿಂದ ಬಿಡುಗಡೆಗೊಳ್ಳುವುದೇ ಪ್ರತಿಷ್ಠೆಯ ಸಂಗತಿ ಎಂಬಂಥಾ ವಾತಾವರಣವೂ ಇದೆ. ಎಲ್ಲ ದಿಕ್ಕುಗಳಿಂದಲೂ ಹಿಡಿಸಿದರೆ ಮಾತ್ರವೇ ಅಂಥಾ ಚಿತ್ರಕ್ಕೆ ಡಿ ಬೀಟ್ಸ್ ಕಡೆಯಿಂದ ಬಿಡುಗಡೆಯ ಭಾಗ್ಯ ಸಿಗುತ್ತದೆ.

ಅಂಥಾದ್ದರಲ್ಲಿ ಶೈಲಜಾ ನಾಗ್ ವಿತರಣಾ ಹಕ್ಕು ಖರೀದಿಸಿದ್ದಾರೆಂದರೆ, ಬನಾರಸ್ ಮೂಡಿ ಬಂದಿರುವ ರೀತಿ ಎಂಥಾದ್ದಿದೆ ಎಂಬುದು ಯಾರಿಗಾದರೂ ಅರ್ಥವಾಗುತ್ತದೆ. ಅದುವೇ ಬನಾರಸ್ ಬಗೆಗಿನ ಬೆರಗನ್ನು ಇಮ್ಮಡಿಯಾಗುವಂತೆ ಮಾಡಿದೆ.

ಬನಾರಸ್ ಅನ್ನು ವಿಶಾಲ ಕರ್ನಾಟಕಕ್ಕೆ ಯಾವ ಸಂಸ್ಥೆಯ ಮೂಲಕ ವಿತರಣೆ ಮಾಡುತ್ತಾರೆಂಬ ಕುತೂಹಲಕ್ಕೆ ಈ ಮೂಲಕ ತೆರೆಬಿದ್ದಿದೆ. ನಿರೀಕ್ಷೆಯಂತೆಯೇ ಡಿ ಬೀಟ್ಸ್ ವಿತರಣಾ ಹಕ್ಕನ್ನು ಖರೀದಿಸಿದೆ. ಅತ್ಯಂತ ವ್ಯವಸ್ಥಿತವಾಗಿ ಚಿತ್ರವನ್ನು ಕರ್ನಾಟಕದ ತುಂಬೆಲ್ಲ ಪಸರಿಸೋದು ಡಿ ಬೀಟ್ಸ್ ಹೆಚ್ಚುಗಾರಿಕೆ. ಅದಕ್ಕೆ ತಕ್ಕುದಾಗಿಯೇ ಬನಾರಸ್ ಬಿಡುಗಡೆಗೆ ಪ್ಲಾನು ಮಾಡಿಕೊಳ್ಳಲಾಗಿದೆ. ಈ ವಿದ್ಯಮಾನದಿಂದಾಗಿ ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್ ಸಂತೃಪ್ತರಾಗಿದ್ದಾರೆ. ನಾಯಕ ನಟ ಝೈದ್ ಖಾನ್ ಮುಖದಲ್ಲಿಯೂ ಸಂತಸ ಮಿರುಗುತ್ತಿದೆ.

ಬನಾರಸ್ ಬಿಡುಗಡೆಗೆ ಇನ್ನು ಬಾಕಿ ಉಳಿದಿರೋದು ಕೆಲವೇ ದಿನಗಳು ಮಾತ್ರ. ಈ ಸಂಬಂಧವಾಗಿ ಝೈದ್ ಖಾನ್ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ನಾಯಕಿ ಸೋನಲ್ ಮೊಂತೇರೋ ಕೂಡಾ ಅದಕ್ಕೆ ಸಾಥ್ ಕೊಟ್ಟಿದ್ದಾರೆ.

ಒಂದಿಡೀ ಚಿತ್ರತಂಡವೇ ನಾನಾ ಜವಾಬ್ದಾರಿ ಹೊತ್ತು ಉತ್ಸಾಹದಿಂದ ಮುಂದಡಿ ಇಡುತ್ತಿದೆ. ಇದೀಗ ಕರ್ನಾಟಕದಲ್ಲಿ ವಿತರಣಾ ಹಕ್ಕು ಡಿ ಬೀಟ್ಸ್ ಉಡಿ ಸೇರುತ್ತಲೇ, ಇನ್ನುಳಿದ ಒಂದಷ್ಟು ಭಾಷೆಗಳಲ್ಲಿಯೂ ಮಾತುಕತೆ ನಡೆಯುತ್ತಿವೆ. ದೊಡ್ಡ ಸಂಸ್ಥೆಗಳೇ ವಿತರಣಾ ಹಕ್ಕು ಖರೀದಿಸಲು ಮುಂದೆ ಬಂದಿವೆ. ಒಟ್ಟಾರೆಯಾಗಿ ಬನಾರಸ್ ಪ್ರಥಮ ಹೆಜ್ಜೆಯಲ್ಲಿಯೂ ನಿರ್ಣಾಯಕವಾಗಿ ಸದ್ದು ಮಾಡುತ್ತಿದೆ.

Previous Post

ಟಿಪ್ಪು ಎಕ್ಸ್‌ ಪ್ರೆಸ್‌ ಗೆ ಒಡೆಯರ್‌ ಎಕ್ಸ್‌ ಪ್ರೆಸ್‌ ಎಂದು ಮರುನಾಮಕರಣ!

Next Post

ಕನ್ನಡದವರಿಗೆ ನಾಚಿಕೆ ಆಗಬೇಕು | Jaggesh | totapuri

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

May 21, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಕನ್ನಡದವರಿಗೆ ನಾಚಿಕೆ ಆಗಬೇಕು | Jaggesh | totapuri

ಕನ್ನಡದವರಿಗೆ ನಾಚಿಕೆ ಆಗಬೇಕು | Jaggesh | totapuri

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada