ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಅಭಯ್ ಎಸ್.ಓಕಾ ಪೀಠ ಗೋವು ರಾಷ್ಟ್ರೀಯ ಪ್ರಾಣಿ ಘೋಷಿಸುವಂತೆ ಕೋರಿ ಗೋವಂಶ್ ಸೇವಾ ಸದನ್ ಸಲ್ಲಿಸಿದ್ದ ಅರ್ಜಿಗೆ ಆಕ್ರೋಶ ವ್ಯಕ್ತಪಡಿಸಿದ್ದು, ಇದು ನ್ಯಾಯಲಯದ ಕೆಲಸವಲ್ಲ ಎಂದು ತಿರಸ್ಕರಿಸಿದೆ.
ಇದು ನ್ಯಾಯಾಲಯದ ಕೆಲಸವೇ? ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ? ಇಂತಹ ವಿಷಯಗಳನ್ನು ನಿರ್ಧರಿಸುವುದು ನ್ಯಾಯಾಲಯದ ಕೆಲಸವಲ್ಲ ಮತ್ತು ಅರ್ಜಿದಾರರ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ ಹೇಳಿ ಎಂದು ಅರ್ಜಿದಾರರಿಗೆ ಸುಪ್ರೀಂಕೋರ್ಟ್ ಖಾರವಾಗಿ ಪ್ರಶ್ನಿಸಿತು.
ಗೋಸಂರಕ್ಷಣೆ ಬಹಳ ಮುಖ್ಯವಾದ ವಿಷಯ. ಸರ್ಕಾರವು ಇದನ್ನು ಪರಿಗಣಿಸಲಿ. ನಾನು ಒತ್ತಾಯಿಸುವುದಿಲ್ಲ, ನಾವು ಗೋವುಗಳಿಂದ ಎಲ್ಲವನ್ನೂ ಪಡೆಯುತ್ತೇವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು. ಆದಾಗ್ಯೂ, ನ್ಯಾಯಾಲಯವು ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ನಿರಾಕರಿಸಿತು. ಈ ಹಿನ್ನೆಲೆ ಅರ್ಜಿದಾರರು ಅದನ್ನು ಹಿಂಪಡೆಯಲು ನಿರ್ಧರಿಸಿದರು.