1,257 ಸಾವಿರ ಕೋಟಿ ಸಿಂಡಿಕೇಟ್ ಬ್ಯಾಂಕ್ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು(ED) ಹಗರಣದ ಪ್ರಮುಖ ಆರೋಪಿಯನ್ನು ವಶಕ್ಕೆ ಪಡೆದಿದೆ.
ಚಂಢಿಘರ್ ಮೂಲದ ಹಿಮಾಂಶು ವರ್ಮಾ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂಧಿತನನ್ನು ಜೈಪುರದಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಅಕ್ಟೋಬರ್ 25ರವರೆಗೆ ನ್ಯಾಯಾಲಯ ಆರೋಪಿಯನ್ನು ED ಸುಪರ್ದಿಗೆ ನೀಡಿದೆ.
ಅಕ್ರಮ ಹಣ ವರ್ಗಾವಣೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಅಧಿಕಾರಿಗಳು ವಿಚಾರಣೆಯ ನಂತರ ಸತ್ಯಾಂಶ ಹೊರಬೀಳಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.