ಪಟಾಕಿ ಉಗ್ರಾಣದಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಆವಶೇಷಗಳಡಿ ಸಿಲುಕಿರುವ ಘಟನೆ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಬನ್ಮೋರ್ ನಗರದಲ್ಲಿ ಸಂಭವಿಸಿದೆ.
ದೀಪಾವಳಿ ಪ್ರಯುಕ್ತ ಸಂಗ್ರಹಿಸಲಾಗಿದ್ದ ಉಗ್ರಾಣದಲ್ಲಿ ಪಟಾಕಿಗಳು ಸ್ಫೋಟಗೊಂಡ ಪರಿಣಾಮ ಈ ದುರಂತ ಸಂಭವಿಸಿದ್ದು, 7 ಮಂದಿ ಗಾಯಗೊಂಡಿದ್ದಾರೆ.
ಸ್ಫೋಟಕ್ಕೆ ಗ್ಯಾಸ್ ಸಿಲಿಂಡರ್ ಕಾರಣವೋ ಅಥವಾ ಗನ್ ಪೌಡರ ಕಾರಣವೋ ಎಂಬ ಬಗ್ಗೆ ಸ್ಥಳೀಯ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ.