ಒಂದೇ ತಿಂಗಳಲ್ಲಿ ನಾಲ್ಕನೇ ಬಾರಿ ವಂದೇ ಮಾತರಂ ರೈಲು ಹಸುವಿಗೆ ಡಿಕ್ಕಿ ಹೊಡೆದ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ.
ಮುಂಬೈ- ಅಹಮದಾಬಾದ್ ನಡುವೆ ಸಂಚರಿಸುವ ವಂದೇ ಮಾತರಂ ರೈಲು ಗುಜರಾತ್ ನ ಅಟುಲ್ ನಿಲ್ದಾಣದ ಬಳಿ ಶನಿವಾರ ಮುಂಜಾನೆ ಹಸುವಿಗೆ ಡಿಕ್ಕಿ ಹೊಡೆದಿದೆ.
ಶನಿವಾರ ಬೆಳಿಗ್ಗೆ 8.17ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಹಸುವಿಗೆ ಡಿಕ್ಕಿ ಹೊಡೆದಿದ್ದರಿಂದ ರೈಲಿನ ಮುಂಭಾಗ ಜಖಂಗೊಂಡಿದ್ದು, 15 ನಿಮಿಷ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಹಸುವಿಗೆ ಡಿಕ್ಕಿ ಹೊಡೆದಿದ್ದರಿಂದ ವಂದೇ ಮಾತರಂ ರೈಲಿಗೆ ಯಾವುದೇ ಹಾನಿ ಆಗಿಲ್ಲ. ಆದರೆ ಮುಂಭಾಗದಲ್ಲಿ ಸ್ವಲ್ಪ ಹಾನಿಯಾಗಿದೆ. ರೈಲು ಸುಗಮವಾಗಿ ಸಂಚರಿಸಿದ್ದು, ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 7ರಂದು ಆನಂದ್ ರೈಲ್ವೆ ನಿಲ್ದಾಣದ ಬಳಿ ಮೊದಲ ಬಾರಿ ಹಸುಗಳಿಗೆ ಡಿಕ್ಕಿ ಹೊಡೆದಿದ್ದು, ಆದರೆ ಎರಡು ದಿನ ನಂತರ ಮತ್ತೊಮ್ಮೆ ಹಸುವಿಗೆ ಡಿಕ್ಕಿ ಹೊಡೆದ ಘಟನೆ ನಡೆದಿತ್ತು.






