• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ʼದಿ ವೈರ್‌ʼ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ದೂರು; ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಣಿಕಂಠ ಡಿ by ಮಣಿಕಂಠ ಡಿ
October 30, 2022
in ದೇಶ, ರಾಜಕೀಯ
0
ʼದಿ ವೈರ್‌ʼ ವಿರುದ್ಧ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ದೂರು; ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು
Share on WhatsAppShare on FacebookShare on Telegram

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು‌ ನೀಡಿದ ದೂರಿನನ್ವಯ ಸುದ್ದಿ ಮಾಧ್ಯಮ ದಿ ವೈರ್‌ ಹಾಗೂ ಅದರ ಸಂಸ್ಥಾಪಕರು ಸೇರಿದಂತೆ ಸಂಪಾದಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಮಾಳವೀಯ ಅವರು ಸಾಮಾಜಿಕ ಮಾಧ್ಯಮ ಸಂಸ್ಥೆ ಮೆಟಾದಲ್ಲಿ (ಫೇಸ್‌ಬುಕ್‌ ಮಾತೃಸಂಸ್ಥೆ) ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು 700 ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ದಿ ವೈರ್, ಅದರ ಸಂಸ್ಥಾಪಕ ಮತ್ತು ಸಂಪಾದಕರ ವಿರುದ್ಧ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ADVERTISEMENT

ವಂಚನೆ, ನಕಲಿ ಮತ್ತು ಕ್ರಿಮಿನಲ್ ಬೆದರಿಕೆಗಾಗಿ ದಿ ವೈರ್ ವಿರುದ್ಧ ಶುಕ್ರವಾರ ಮಾಳವಿಯಾ ಅವರು ವಿಶೇಷ ಪೊಲೀಸ್ ಆಯುಕ್ತರಿಗೆ (ಅಪರಾಧ) ದೂರು ನೀಡಿದ್ದರು. ಅದರನ್ವಯ ದಿ ವೈರ್ ಸಂಸ್ಥಾಪಕ ಸಿದ್ಧಾರ್ಥ್ ವರದರಾಜನ್ ಮತ್ತು ಸಂಪಾದಕರಾದ ಸಿದ್ಧಾರ್ಥ್ ಭಾಟಿಯಾ, ಎಂ ಕೆ ವೇಣು ಮತ್ತು ಜಾಹ್ನವಿ ಸೇನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅವರ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ), 468 (ಮೋಸ ಮಾಡುವ ಉದ್ದೇಶದಿಂದ ನಕಲಿ ಸೃಷ್ಟಿ), 469 (ಪ್ರತಿಷ್ಠೆಗೆ ಹಾನಿ ಮಾಡಲು ನಕಲಿ ದಾಖಲೆ), 471 (ನಕಲಿ ದಾಖಲೆ ಬಳಕೆ), 500 (ಮಾನನಷ್ಟ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ದಿ ವೈರ್ ಮತ್ತು ಕೆಲವು ಅಪರಿಚಿತ ವ್ಯಕ್ತಿಗಳು ನನ್ನ ಖ್ಯಾತಿಯನ್ನು ಕೆಡಿಸುವ ಉದ್ದೇಶದಿಂದ ಕ್ರಿಮಿನಲ್ ಷಡ್ಯಂತ್ರವನ್ನು ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ, ಉದ್ದೇಶಪೂರ್ವಕವಾಗಿ ನನ್ನ ಹೆಸರನ್ನು (ದಿ ವೈರ್)‌ ವರದಿಯಲ್ಲಿ ಸೇರಿಸಿದೆ. ನನ್ನನ್ನು ಸಿಲುಕಿಸಲು (ನಕಲಿ) ಪುರಾವೆಗಳನ್ನು ಸೃಷ್ಟಿಸಿದೆ. ಹಾಗಾಗಿ, ದಿ ವೈರ್ ಮತ್ತು ಅದರ ನಿರ್ವಹಕರ/ವರದಿಗಾರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಹುಡುಕುವುದಕ್ಕಿಂತ ನನಗೆ ಬೇರೆ ಆಯ್ಕೆಗಳಿಲ್ಲ.” ಎಂದು ಮಾಳವಿಯಾ ಶುಕ್ರವಾರ ತಿಳಿಸಿದ್ದರು.

ತನ್ನ ಪ್ರತಿಷ್ಠೆಗೆ ಧಕ್ಕೆ ತರುವಂತಹ ಸುಳ್ಳು ಸುದ್ದಿಗಳನ್ನು ವೈರ್ ಪ್ರಕಟಿಸಿದೆ ಎಂದು ಮಾಳವೀಯ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿ
Previous Post

ಮನೆಗಳಲ್ಲಿ ಪಾಠ ಹೇಳಿಕೊಡೋರಿಗೆ ಶಿಕ್ಷಣ ಇಲಾಖೆಯಿಂದ ಶಾಕ್; ಅನಧಿಕೃತ ಟ್ಯೂಷನ್‌ ಕ್ಲಾಸ್‌ಗಳಿಗೆ ಬ್ರೇಕ್

Next Post

ಪತ್ರಕರ್ತರಿಗೆ ಉಡುಗೊರೆ; ಕಾಂಗ್ರೆಸ್‌ಗೆ ಮಾತನಾಡುವ ನೈತಿಕ ಹಕ್ಕಿಲ್ಲ : ಸಿಎಂ ಬೊಮ್ಮಾಯಿ

Related Posts

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?
ರಾಜಕೀಯ

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

by ಪ್ರತಿಧ್ವನಿ
May 21, 2026
0

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “Cockroach Janata Party” ಎಂಬ ಪದ ಭಾರೀ ವೈರಲ್ ಆಗುತ್ತಿದೆ. ಮೊದಲ ನೋಟಕ್ಕೆ ಇದು ಹಾಸ್ಯ, ಮೀಮ್ ಅಥವಾ ಟ್ರೋಲ್ ರಾಜಕೀಯದ...

Read moreDetails
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

ಪತ್ರಕರ್ತರಿಗೆ ಉಡುಗೊರೆ; ಕಾಂಗ್ರೆಸ್‌ಗೆ ಮಾತನಾಡುವ ನೈತಿಕ ಹಕ್ಕಿಲ್ಲ : ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada