ಇತ್ತೀಚೆಗಷ್ಟೇ ಪುನರಾರಂಭಗೊಂಡಿರುವ ಗುಜರಾತ್‌ನ ಮೋರ್ಬಿಯಲ್ಲಿರುವ ತೂಗು ಸೇತುವೆ ಕುಸಿದು ಬಿದ್ದಿದ್ದು ಕನಿಷ್ಟ 141 ಮಂದಿ ಮೃತಪಟ್ಟಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಸೇತುವೆ ಕುಸಿಯುವಾಗ ಸೇತುವೆ ಮೇಲೆ ಸುಮಾರು 500 ಮಂದಿ ಇದ್ದರು ಎಂದು ಮಾಧ್ಯಮಗಳ ವರದಿ ಹೇಳಿದೆ.
ಮೋರ್ಬಿ ತೂಗು ಸೇತುವೆಯು ಹಲವು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು, ದುರಸ್ತಿ ಮತ್ತು ನವೀಕರಣದ ನಂತರ, ಕೇವಲ ನಾಲ್ಕು ದಿನಗಳ ಹಿಂದೆ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ಸಂದರ್ಭದಲ್ಲಿ ಪುನರಾರಂಭಿಸಲಾಗಿತ್ತು.
ಬ್ರಿಡ್ಜ್ ದುರಂತಕ್ಕೆ ಸಂಬಂಧಿಸಿದಂತೆ ನವೀಕರಣದ ಗುತ್ತಿಗೆ ಪಡೆದಿದ್ದ ಕಂಪನಿಯ ಇಂಜಿನಿಯರ್, ಮ್ಯಾನೇಜರ್ ಹಾಗೂ ಸೆಕ್ಯೂರಿಟಿ ಗಾರ್ಡ್‌ಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಮತ್ತು ಇನ್ನಷ್ಟು ಜನರ ಬಂಧನವಾಗುವ ಸಾಧ್ಯತೆ ಹೆಚ್ಚಿದೆ.
ಇನ್ನು ದುರಸ್ಥಿ ಕಾರ್ಯ ಮುಗಿಯುವ ಮುನ್ನವೇ ಬ್ರಿಡ್ಜ್ ಸಾರ್ವಜನಿಕರ ಸೇವೆಗೆ ಮುಕ್ತವಾಗಿಸಿದ್ದು ದುರಂತಕ್ಕೆ ಕಾರಣವಾಗಿದೆ ಎಂಧು ಹೇಳಲಾಗಿದೆ.