ರಾಜ್ಯೋತ್ಸವದ ಮೆರವಣಿಗೆ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ಗೆ ಪ್ರತಿಭಟನೆಯ ಬಿಸಿ ತಟ್ಟಿದೆ.
ನಗರದ ಚಾಮರಾಜ ವೃತ್ತದಲ್ಲಿ ಮೆರವಣಿಗೆ ಸಾಗುತ್ತಿದ್ದ ವೇಳೆ ದಿಢೀರ್ ಪ್ರತಿಭಟನೆ ನಡೆಸಿದ ಏಕಲವ್ಯ ನಗರ ನಿವಾಸಿಗಳು ಸಚಿವರ ಹಾಗೂ ಸರ್ಕಾರದ ವಿರುದ್ದ ಗೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.
ಕಳೆದ ಒಂದು ತಿಂಗಳಿನಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಏಕಲವ್ಯ ನಗರದಲ್ಲಿ ವಾಸವಿರುವ ಅಲೆಮಾರಿ ಸಮುದಾಯದವರು ತಮ್ಮಗೆ ನಿವೇಶನಗಳ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರು ಸಹ ಯಾರೂ ನಮ್ಮ ಮನವಿಯನ್ನು ಕೇಳಲು ತಯಾರಿಲ್ಲ ಎಂದು ದೂರಿದ್ದಾರೆ.
ಪ್ರತಿಭಟನಾ ನಿರತರನ್ನು ಬಂಧಿಸಿ ಪೊಲೀಸರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನಕ್ಕೆ ಕರೆದೊಯ್ದರು.