ಬಹುಭಾಷಾ ನಟಿ ರಂಭಾ ಕಾರು ಅಪಘಾತಕ್ಕೀಡಾಗಿದ್ದು ಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ನಟಿ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಬರುವ ಸಮಯದಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು ತಾವು, ಮಕ್ಕಳು ಹಾಗೂ ದಾದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಹೇಳಿದ್ದಾರೆ. ಆದರೆ, ಅವರ ಪುತಗರಿ ಸಶಾಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮದುವೆಯ ನಂತರ ಚಿತ್ರರಂಗದಿಂದ ಅಂತರ ಕಾಯ್ದುಕೊಂಡ ನಟಿ ಸದ್ಯ ವಿದೇಶದಲ್ಲಿ ಕುಟುಂವಸ್ಥರೊಂದಿಗೆ ನೆಲೆಸಿದ್ದಾರೆ.