ಆರಂಭಿಕ ಮ್ಯಾಕ್ಸ್ ಓಡ್ವ್ಯಾಡ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮ್ಯಾನ್ ಟಾಮ್ ಕೂಪರ್ ಸ್ಪೋಟಕ ಬ್ಯಾಟಿಂಗ್ ಫಲವಾಗಿ ನೆದರ್ಲೆಂಡ್ ತಂಡವು ಜಿಂಬಾಬ್ವೆ ವಿರುದ್ದ 5 ವಿಕೆಟ್ಗಳ ಜಯ ಸಾಧಿಸಿದೆ.
ಅಡಿಲೇಡ್ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮ್ಯಾನ್ ಸಿಕಂದರ್ ರಾಜ(40 ರನ್, 24 ಎಸೆತ, 3 ಬೌಂಡರಿ, 3 ಸಿಕ್ಸರ್) ಸ್ಪೋಟಕ ಬ್ಯಾಟಿಂಗಗ ಫಲವಾಗಿ 19.2 ಓವರ್ಗಳಲ್ಲಿ 117 ರನ್ಗಳಿಗೆ ಸರ್ವ ಪತನವಾಯಿತ್ತು.
ಗುರಿ ಬೆನ್ನಟ್ಟಿದ ನೆರ್ದಲೆಂಡ್ ತಂಡವು ಆರಂಭಿಕ ಮ್ಯಾಕ್ಸ್ ಓಡ್ವ್ಯಾಡ್(52 ರನ್, 47 ಎಸೆತ, 8 ಬೌಂಡರಿ, 1 ಸಿಕ್ಸರ್) ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮ್ಯಾನ್ ಟಾಮ್ ಕೂಪರ್ (32 ರನ್, 29 ಎಸೆತ, 2 ಬೌಂಡರಿ, 1 ಸಿಕ್ಸರ್) ಸ್ಪೋಟಕ ಬ್ಯಾಟಿಂಗ್ ಫಲವಾಗಿ 18 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 120 ರನ್ ಗಳಿಸಿತ್ತು.






