• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರಧಾನಿ ಮೋದಿ ಆಧುನಿಕ ಭಾರತದ ವಿಕಾಸ ಪುರುಷ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
November 11, 2022
in ಕರ್ನಾಟಕ, ದೇಶ, ರಾಜಕೀಯ
0
ಪ್ರಧಾನಿ ಮೋದಿ ಆಧುನಿಕ ಭಾರತದ ವಿಕಾಸ ಪುರುಷ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಕೆಂಪೇಗೌಡರ ಚಿಂತನೆ ಹಾಗೂ ವಿಚಾರಧಾರೆಗಳ ಹಾದಿಯಲ್ಲಿ ನಡೆದು ಕರ್ನಾಟಕವನ್ನು ಅಭಿವೃದ್ಧಿಗೊಳಿಸುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಪ್ರಧಾನಮಂತ್ರಿಗಳು ರಾಜ್ಯಕ್ಕೆ ಎರಡು ಕೊಡುಗೆಗಳನ್ನು ಕೊಟ್ಟಿದ್ದಾರೆ. ವಂದೇಭಾರತ ರೈಲು ಮತ್ತು ವಿಮಾಣನಿಲ್ದಾಣದ 2ನೇ ಟರ್ಮಿನಲ್, ಸಬ್ಅರ್ಬನ್ ರೈಲು. ಕರಾವಳಿಯಲ್ಲಿ ಬಂದರು ನಿರ್ಮಾಣ ಸೇರಿದಂತೆ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡುತ್ತಿರುವ ಪ್ರಧಾನಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕೆಂಪೇಗೌಡರ ವಿಚಾರಧಾರೆಯ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಲಾಗಿದೆ ಎಂದಿದ್ದಾರೆ.

ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿರುವ ದಿನ

ಇಂದು ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿರುವ ದಿನವಾಗಿದೆ. ನಾಡಿಗೆ ಶ್ರೇಷ್ಟ ಸಂತರಾದ ಕನಕದಾಸರ ಜಯಂತಿ , ಮಹರ್ಷಿ ವಾಲ್ಮೀಕಿಯವರಿಗೆ ಹಾಗೂ ನಾಡಿನ ಸಂರಕ್ಷಣೆಗೆ ಜೀವತೆತ್ತ ವೀರ ವನಿತೆ ಒನಕೆ ಓಬವ್ವ ಪುಷ್ಪಾರ್ಚನೆ ಮಾಡುವ ಮೂಲಕ ನಾಡಿನ ಜನರ ಭಾವನೆಗಳಿಗೆ ಗೌರವ ಸಲ್ಲಿಸಿದ್ದಾರೆ. ಬೆಂಗಳೂರು, ಮೈಸೂರು ಚೆನ್ನೈಯನ್ನು ಸಂಪರ್ಕಿಸುವ ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಿಸಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾಣ ನಿಲ್ದಾಣದ ಟರ್ಮಿನಲ್ 2 ಕ್ಕೆ ಚಾಲನೆ ನೀಡಲಾಗಿದ್ದು, ಇದು ದೇಶದ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ. ಇದಕ್ಕಾಗಿ ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಪ್ರಧಾನಿ ಮಮತ್ರಿ ನರೇಂದ್ರ ಮೋದಿಯವರಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.

ಬೆಂಗಳೂರು ಇಂದು ಅಂತರರಾಷ್ಟ್ರೀಯ ನಗರವಾಗಿ ಬೆಳೆದಿದೆ

ನಾಡಪ್ರಭು ಕೆಂಪೇಗೌಡರು, ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗದ ದರ್ಶನವನ್ನು ಬೆಂಗಳೂರಿನ ಸುತ್ತಮುತ್ತಲಿನ ಗ್ರಾಮಗಳಿಗೆ ಮಾಡಿಸಿದ್ದಾರೆ. ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಇಂದು ಅಂತರರಾಷ್ಟ್ರೀಯ ನಗರವಾಗಿ ಬೆಳೆದಿದೆ. ಯೋಜನಾಬದ್ಧ ನಗರ ನಿರ್ಮಿಸಿ, ಹಲವು ಕೆರೆಕಟ್ಟೆಗಳು, ಪೇಟೆಗಳನ್ನು ನಿರ್ಮಿಸುವ ಮೂಲಕ ಜನ ನೆಮ್ಮದಿಯ ಜೀವನ ಬದುಕುವಂತೆ ಮಾಡಿದ್ದಾರೆ. ನಾಡಪ್ರಭು. ಕೆಂಪೇಗೌಡರಿಗೆ ಗೌರವ ಸಲ್ಲಿಸುವ ಮುಖಾಂತರ ನಾಡಿನ ಸಂಸ್ಕೃತಿ, ಇತಿಹಾಸ ಪರಂಪರೆ, ಪ್ರಗತಿಪರ ಚಿಂತನೆಗೆ ಗೌರವ ಸಲ್ಲಿಸಿದಂತಾಗಿದೆ. ಗುಜರಾತಿನಲ್ಲಿ ಏಕತೆಯ ಪ್ರತಿಮೆಯಿದ್ದರೆ, ರಾಜ್ಯದ ಸರದಾರ ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಉದ್ಘಾಟಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಆಧುನಿಕ ಭಾರತದ ವಿಕಾಸ ಪುರುಷ

ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಆಧುನಿಕ ಭಾರತದ ವಿಕಾಸ ಪುರುಷರು. ದೇಶದ ಹತ್ತುಹಲವಾರು ಸವಾಲುಗಳನ್ನು ಬಗೆಹರಿಸಿ ಬಲಿಷ್ಟ ಭಾರತವನ್ನು ಕಟ್ಟಿ, ಆತ್ಮನಿರ್ಭರ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ಅಭಿವೃದ್ಧಿಯಲ್ಲಿ ಎಲ್ಲರಿಗೂ ಅವಕಾಶ ಕೊಟ್ಟು, ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಬಹಳ ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಇಡೀ ವಿಶ್ವದಲ್ಲಿ ಆರ್ಥಿಕ ಹಿಂಜರಿತವಿದ್ದ ಸಂದರ್ಭದಲ್ಲಿ ಭಾರತ ಆರ್ಥಿಕವಾಗಿ ಬಲಿಷ್ಟಗೊಳ್ಳುತ್ತಿದ್ದರೆ, ಅದಕ್ಕೆ ಪ್ರಧಾನಿ ಮೋದಿಯವರ ಯೋಜನೆಗಳೇ ಕಾರಣ.ಒಬ್ಬ ವಿಕಾಸಪುರುಷ ದಾರಿಯಲ್ಲಿ ನವಭಾರತ ನಿರ್ಮಾಣ ಮಾಡುತ್ತಿರುವವರ ಕೈಯಿಂದ ಕೇಂಪೇಗೌಡರ ಮೂರ್ತಿ ಅನಾವರಣ ಮಾಡಿರುವುದು ದೈವೇಚ್ಛೆಯಾಗಿದೆ ಎಂದು ಬಣ್ಣಿಸಿದ್ದಾರೆ.

Previous Post

dilpasand Celebrity Show | ಕೃಷ್ಣ ಅವರಿಗೆ ಹೇಳಿ ಮಾಡಿಸಿದ ಮೂವಿ | Ajay Rao

Next Post

ಕಾರವಾರ; ಶಾಲಾ ಬಸ್‌-ಟ್ಯಾಂಕರ್‌ ಅಪಘಾತ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಕಾರವಾರ; ಶಾಲಾ ಬಸ್‌-ಟ್ಯಾಂಕರ್‌ ಅಪಘಾತ

ಕಾರವಾರ; ಶಾಲಾ ಬಸ್‌-ಟ್ಯಾಂಕರ್‌ ಅಪಘಾತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada