• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಿದ್ದರಾಮಯ್ಯ ಕ್ಷೇತ್ರ ಶೋಧದ ಬಗ್ಗೆ ಲಘುವಾಗಿ ಮಾತನಾಡಲ್ಲ : ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
November 13, 2022
in ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ಕ್ಷೇತ್ರ ಶೋಧದ ಬಗ್ಗೆ ಲಘುವಾಗಿ ಮಾತನಾಡಲ್ಲ :  ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ADVERTISEMENT

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಸಚಿವರಾಗಿದ್ದವರು ಹಾಗೂ ಉಪಮುಖ್ಯಮಂತ್ರಿಯಾಗಿದ್ದವರು. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಅವರಿಗೆ ಕ್ಷೇತ್ರವೇ ಇಲ್ಲ ಎಂಬ ಕ್ಷುಲ್ಲಕ ಮಾತುಗಳು ನಮಗೆ ಅವಶ್ಯಕತೆ ಇಲ್ಲ ಎಂದರು.

ಸಿದ್ದರಾಮಯ್ಯ ಹೋದರು ಎಂದು ಕೋಲಾರದಲ್ಲಿ ನಮ್ಮ ಯಾವುದೇ ಕಾರ್ಯತಂತ್ರ ಬದಲಾಗಲ್ಲ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳಿದ್ದಾರೆ. ಸಿದ್ದರಾಮಯ್ಯ ಅಷ್ಟೆ ಅಲ್ಲ, ಯಾರೇ ನಿಂತರೂ ನಮ್ಮ ಪಕ್ಷಕ್ಕೆ ಆತಂಕ ಇಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕೋಲಾರದಲ್ಲಿ ಸಿದ್ದರಾಮಯ್ಯಗೆ ಸಮಸ್ಯೆಯೇ ಶ್ರೀನಿವಾಸ್‌ಗೌಡರು

ಕೋಲಾರದಲ್ಲಿ ಸಿದ್ದರಾಮಯ್ಯ ಅವರಿಗೆ ಸಮಸ್ಯೆ ಎಂದರೆ ನಮ್ಮ ಪಕ್ಷಕ್ಕೆ ಕೈಕೊಟ್ಟು ಹೋದ ಹಾಲಿ ಶಾಸಕ ಶ್ರೀನಿವಾಸ್‌ಗೌಡರು. ಅವರು ನಮಗೆ ಮಾಡಿದ ದ್ರೋಹವೇ ಈ ಬಾರಿ ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮುಳುವಾಗಲಿದೆ. ಸಿದ್ದರಾಮಯ್ಯ ಅವರಿಗೆ ನಕಾರಾತ್ಮಕ ಅಂಶಗಳು ಇರುವುದೇ ಅಲ್ಲಿ. ಹೀಗಾಗಿ ನಮ್ಮ ಪಕ್ಷಕ್ಕೆ ಆತಂಕ ಏನೂ ಇಲ್ಲ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಬಹುತೇಕ ಎಲ್ಲ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆಯುತ್ತಿದೆ. ಸಿದ್ದರಾಮಯ್ಯ ಕೂಡ ಅದೇ ಲೆಕ್ಕದಲ್ಲಿ ಕೋಲಾರಕ್ಕೆ ಹೋಗಿರಬಹುದು. ಚಾಮುಂಡೇಶ್ವರಿ, ಬಾದಾಮಿಯಲ್ಲೂ ಜಾತಿ ಲೆಕ್ಕಾಚಾರದಲ್ಲಿ ಚುನಾವಣೆ ನಡೆದಿದೆ. ಕಳೆದ ಚುನಾವಣೆಯಲ್ಲಿ ಕೊನೆ ಸಮಯದಲ್ಲಿ ನಾನು ಮೂರು ದಿನ ಬಾದಾಮಿಗೆ ಹೋಗದೆ ಇದ್ದಿದ್ದರೆ ಹತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಸಿದ್ದರಾಮಯ್ಯ ಅವರು ಸೋಲುತ್ತಿದ್ದರು.

ಗುಳೆದಗುಡ್ಡ ಸೇರಿದಂತೆ ಹಲವೆಡೆ ನಾನು ಅಂತಿಮ ಕ್ಷಣದಲ್ಲಿ ಪ್ರಚಾರ ಮಾಡಿದ್ದೆ, ಜನರಿಂದ ಹೆಚ್ಚು ಪ್ರತಿಕ್ರಿಯೆ ವ್ಯಕ್ತವಾಯಿತು. ನಮ್ಮ ಅಭ್ಯರ್ಥಿಗೆ 28 ಸಾವಿರ ಮತ ಪಡೆದರು. ಆಗ ಸಿದ್ದರಾಮಯ್ಯ ಚಿಕ್ಕ ಅಂತರದಲ್ಲಿ ಗೆದ್ದರು. ಇಲ್ಲವಾಗಿದ್ದರೆ ಹತ್ತು ಸಾವಿರ ಮತಗಳ ಅಂತರದಿಂದ ಸೋಲುತ್ತಿದ್ದರು. ಹಾಗೆ ನೋಡಿದರೆ ಅವರ ಗೆಲುವಿಗೆ ನಾನೇ ಕಾರಣ. ಇದರಲ್ಲಿ ಯಾವುದೇ ಸಂಶಯ ಇಲ್ಲ. ಸಿದ್ದರಾಮಯ್ಯ ಅವರಿಗೆ ಎರಡು ಬಾರಿ ನನ್ನಿಂದ ರಾಜಕೀಯ ಮರುಜನ್ಮ ಸಿಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಾಭಿಪ್ರಾಯಕ್ಕಿಂತ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಬೇಕು. ಮಿಷನ್ 123 ಗುರಿಯಲ್ಲಿ ಕೋಲಾರ ಕ್ಷೇತ್ರವೂ ಒಂದು. ಈ ಬಗ್ಗೆ ನಾವು ಎಚ್ಚರ ತಪ್ಪುವುದಿಲ್ಲ ಎಂದು ಅವರು ತಿಳಿಸಿದರು.

18 ಅಥವಾ 20ರಂದು ಪಂಚರತ್ನ ರಥಯಾತ್ರೆ

ಈ ತಿಂಗಳ 18 ಅಥವ 20 ರಂದು ಪಂಚರತ್ನ ರಥಯಾತ್ರೆಯ ಮತ್ತೆ ಆರಂಭ ಮಾಡಲಾಗುವುದು. ಈ ಎರಡು ದಿನದಲ್ಲಿ ಒಂದು ದಿನಾಂಕವನ್ನು ಇನ್ನೆರಡು ಮೂರು ದಿನದಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕೆಂಪೇಗೌಡರ ಪ್ರತಿಮೆ ನಿಲ್ಲಿಸಿ ಬಿಟ್ರೆ ಒಕ್ಕಲಿಗರ ನಾಯಕರಾಗಲ್ಲ:

ಬಿಜೆಪಿಯಲ್ಲಿ ಒಕ್ಕಲಿಗ ನಾಯಕರ ಬೆಳವಣಿಗೆಯನ್ನು ಕುಮಾರಸ್ವಾಮಿ ಅವರು ಸಹಿಸುತ್ತಿಲ್ಲ ಎಂದು ಬಿಜೆಪಿಯ ಕೆಲ ನಾಯಕರು ನೀಡಿರುವ ಹೇಳಿಕೆಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿಗಳು; ನಾನು ಎರಡು ಕಡೆಗಳಲ್ಲಿ ನಾಡಪ್ರಭುಗಳ ಪ್ರತಿಮೆ ಅನಾವರಣ ಮಾಡಿ ಬಂದೆ. ಹಾಗಂತ ನನ್ನ ಜೊತೆ ಜನರು ಓಡಿ ಬರ್ತಾರಾ? ಕೆಂಪೇಗೌಡರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿದರೆ ಜನರು ಗೌರವ ನೀಡುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.

ಪ್ರತಿಮೆ ಅನಾವರಣ ಮಾಡಿರೋದಕ್ಕೂ, ಮುಂದಿನ ಚುನಾವಣೆಗೂ ಬಹಳ ವ್ಯತ್ಯಾಸ ಇದೆ. ನೆರೆ, ಬರ ಬಂದಾಗ ಜನರು ಬೀದಿಗೆ ಬಂದರು. ಜೀವಂತ ಪ್ರತಿಮೆಗಳಿಗೆ ಈ ನಾಯಕರು ಏನು ಕೊಟ್ಟಿದ್ದಾರೆ? ಹಾಗೆ ನೋಡಿದರೆ ಒಕ್ಕಲಿಗ ಸಮಾಜಕ್ಕೆ ಬಿಜೆಪಿಯ ಕೊಡುಗೆ ಏನು? ಕೆಂಪೇಗೌಡರ ಪ್ರತಿಮೆ ಮಾಡಿ ಹೆಸರಿನಲ್ಲಿ ಗಿನ್ನೆಸ್ ರೆಕಾರ್ಡ್ ಮಾಡಿದ್ದಾರೆ ಎಂದು ಹೇಳುತ್ತಾರೆ. ಅದೇ ಕೆಂಪೇಗೌಡರು ನಿರ್ಮಿಸಿದ ಕೆರೆಗಳನ್ನು ನುಂಗಿದ ಕಾರಣಕ್ಕೆ ಬಿಜೆಪಿಯವರನ್ನು ಗಿನ್ನೆಸ್ ದಾಖಲೆಗೆ ಸೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.

ಪ್ರತಿಮೆಯಿಂದ ಮತ ಬರುತ್ತೆ ಎನ್ನುವ ಭ್ರಮೆಯಲ್ಲಿ ಇದ್ದಾರೆ ಬಿಜೆಪಿ ನಾಯಕರು. ಆ ಪ್ರತಿಮೆ ನಿರ್ಮಾಣಕ್ಕೆ 64 ಕೋಟಿ ಹಣ ಖರ್ಚು ಮಾಡಿದ್ದಾರೆ. ಪ್ರತಿಮೆ ಮಾಡಿ ದೊಡ್ಡ‌ ಲೀಡರ್ ಅನ್ನಿಸಿಕೊಳ್ತಾರಾ ಇವರು. ಇದು ಜನರಿಗೆ ಗೊತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮಕ್ಕೆ ಬರುವಂತೆ ನಡುರಾತ್ರಿ ಬಂದು ದೇವೇಗೌಡರಿಗೆ ಆಹ್ವಾನ ನೀಡಿದ್ದಾರೆ. ಯಾರೋ ಮನೆ ಹತ್ತಿರ ಬಂದು ಪತ್ರ ‌ಕೊಟ್ಟು ಹೋಗಿದ್ದಾರೆ. ರಾತ್ರಿ ಕೊಟ್ಟ ಪತ್ರ ನೋಡಿ ಬೆಳಗ್ಗೆ ಹೋಗೋಕೆ ಆಗುತ್ತಾ? ಆಹ್ವಾನ ಪತ್ರಿಕೆ‌‌ ಮುದ್ರಣ ಮಾಡಿ 10 ದಿನ ಆಗಿದೆ. ಅದರಲ್ಲೂ ದೇವೇಗೌಡರ ಹೆಸರು ಇರಲಿಲ್ಲ. ಅವರು ಮಾಜಿ ಪ್ರಧಾನಿಗಳು ಹಾಗೂ ಹಾಲಿ ರಾಜ್ಯಸಭೆ ಸದಸ್ಯರು. ಇದೇನಾ ಶಿಷ್ಟಾಚಾರ? ಉದ್ದೇಶ ಪೂರ್ವಕವಾಗಿಯೇ ಹೀಗೆ ಮಾಡಿದ್ದಾರೆ. ಸರ್ಕಾರದ ದುಡ್ಡನಲ್ಲಿ ಬಿಜೆಪಿ ಕಾರ್ಯಕ್ರಮ ಮಾಡಿಕೊಂಡಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಅವರು ಡಬಲ್ ಎಂಜಿನ್ ಸರ್ಕಾರ ಅಂತ ಹೇಳಿದ್ದಾರೆ. ಇದು ದುಡ್ಡು ಲೂಟಿ ಮಾಡುವ ಡಬಲ್ ಎಂಜಿನ್ನಾ? ಹಣ ಹೊಡೆದುಕೊಂಡು ಹೋಗಿ ದೆಹಲಿಯಲ್ಲಿ ಇಟ್ಟುಕೊಂಡು ಹೋಗೋದಾ? ನಿಮ್ಮ ಡಬಲ್ ಎಂಜಿನ್ ಸರ್ಕಾರನಾ? ಎಂದು ಪ್ರಹಾರ ನಡೆಸಿದ ಅವರು; ವೀರಶೈವ ಸಮುದಾಯದವರು ಸೇರಿ ಎಲ್ಲರೂ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

2006ರಲ್ಲಿ ಬಿಜೆಪಿಯ ಯಾವುದೇ ನಿರ್ಧಾರಗಳು ರಾಜ್ಯದಲ್ಲಿ ಆಗುತ್ತಿದ್ದವು. ಈಗ ಎಲ್ಲವೂ ದೆಹಲಿಯಲ್ಲಿ ಆಗುತ್ತವೆ. ರಾಜ್ಯದ ಜನರ ಇದನ್ನ ಅರ್ಥ ಮಾಡಿಕೊಳ್ಳಬೇಕು. ಎಲ್ಲಾ ಲಕೋಟೆಗಳು ದೆಹಲಿಯಿಂದಲೇ ಬರುತ್ತವೆ. ಕರ್ನಾಟಕ ಲಕೋಟೆ ಎನ್ನುವುದು ಬಿಜೆಪಿಯಲ್ಲಿ ಮುಗಿದ ಅಧ್ಯಾಯ ಎಂದು ಹೇಳಿದರು ಅವರು.

Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರದಿಂದ ರಸ್ತೆ ಗುಂಡಿಗಳ ಬಗ್ಗೆ ಪ್ರಗತಿ ವರದಿ ನೀಡುವಂತೆ ಪಾಲಿಕೆಗೆ ಸೂಚನೆ

Next Post

H.D.Kumaraswamy : ಆ 3 ದಿನ ನಾನು ಹೋಗದಿದ್ರೆ ಸಿದ್ದುಗೆ ಸೋಲು | Pratidhvani |

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
H.D.Kumaraswamy : ಆ 3 ದಿನ ನಾನು ಹೋಗದಿದ್ರೆ ಸಿದ್ದುಗೆ ಸೋಲು  | Pratidhvani |

H.D.Kumaraswamy : ಆ 3 ದಿನ ನಾನು ಹೋಗದಿದ್ರೆ ಸಿದ್ದುಗೆ ಸೋಲು | Pratidhvani |

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada