• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಧಿಕಾರಕ್ಕಾಗಿ ‌ಬಿಜೆಪಿ ಎಂತಹ ಹೀನ ಕೆಲಸಕ್ಕೂ ಸೈ : ದಿನೇಶ್‌ ಗುಂಡೂರಾವ್‌

ಪ್ರತಿಧ್ವನಿ by ಪ್ರತಿಧ್ವನಿ
November 17, 2022
in ಕರ್ನಾಟಕ, ರಾಜಕೀಯ
0
ಅಧಿಕಾರಕ್ಕಾಗಿ ‌ಬಿಜೆಪಿ ಎಂತಹ ಹೀನ ಕೆಲಸಕ್ಕೂ ಸೈ : ದಿನೇಶ್‌ ಗುಂಡೂರಾವ್‌
Share on WhatsAppShare on FacebookShare on Telegram

ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ – ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2023ರ ಕಾರ್ಯಚಟುವಟಿಕೆಗೆ ನೀಡಿದ್ದ ಅನುಮತಿಯನ್ನು ದುರುಪಯೋಗಗೊಂಡಿರುವ ಬಗ್ಗೆ ಹಾಗೂ ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಅನಧಿಕೃತವಾಗಿ ಕದ್ದಿರುವ ಬಗ್ಗೆ ಪ್ರತಿಧ್ವನಿ ಮತ್ತು TheNewsMinute ಜಂಟಿ ತನಿಖಾ ವರದಿ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಅಧಿಕಾರಕ್ಕಾಗಿ ‌ಬಿಜೆಪಿ ಎಂತಹ ಹೀನ ಕೆಲಸಕ್ಕೂ ಸೈ ಎಂದು ಕಿಡಿಕಾರಿದ್ದಾರೆ.

ADVERTISEMENT

ಓಟರ್ ಐಡಿ ಹಗರಣದ ಮೂಲಕ ಮಾನಗೆಟ್ಟ BJPಯವರ ನೀಚಕೃತ್ಯ ಬಯಲಾಗಿದೆ. ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹಿಸುವ ಮೂಲಕ ಪ್ರಜಾಪ್ರಭುತ್ವವನ್ನೇ ಕಗ್ಗೊಲೆ ಮಾಡುವ ಹೀನ ಕೆಲಸಕ್ಕೆ BJPಯವರು ಕೈ ಹಾಕಿದ್ದಾರೆ. ಖಾಸಗಿ ಸಂಸ್ಥೆಗಳು ಮತದಾರರ ಮಾಹಿತಿ ಸಂಗ್ರಹಿಸಲು ಅಧಿಕಾರವೇ ಇಲ್ಲ. ಹೀಗಿರುವಾಗ BBMP ಖಾಸಗಿ ಸಂಸ್ಥೆಗೆ ಈ ಜವಾಬ್ಧಾರಿ ನೀಡಿದ್ಯಾಕೆ ಎಂದು ಪ್ರಶ್ನಿಸಿದ್ದಾರೆ.

BBMP ವ್ಯಾಪ್ತಿಯಲ್ಲಿ ಮತದಾರರ ಖಾಸಗಿ ಮಾಹಿತಿ ಸಂಗ್ರಹಿಸಿರುವ ಚಿಲುಮೆ ಎಂಬ ಸಂಸ್ಥೆ BJPಗೆ ಮತ ಹಾಕದವರನ್ನು ಪಟ್ಟಿಯಿಂದ ಕೈ ಬಿಟ್ಟಿದೆ. ಇದು ಅಕ್ಷಮ್ಯ ಅಪರಾಧ ಮತ್ತು ಚುನಾವಣಾ ವ್ಯವಸ್ಥೆ ಮೇಲೆ ಜನರು ಇಟ್ಟಿರುವ ನಂಬಿಕೆಗೆ ಎಸಗಿದ ದ್ರೋಹ. ಇಂತಹ ಹೀನ ಕೃತ್ಯ ಮುಖ್ಯಮಂತ್ರಿಗಳ ಹಾಗೂ ಇನ್ನುಳಿದ BJP ನಾಯಕರ ಗಮನಕ್ಕೆ ಬಾರದೆ ನಡೆಯಲು‌ ಸಾಧ್ಯವೇ ಎಂದು ಕಿಡಿಕಾರಿದ್ದಾರೆ.

ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ಪರಿಷ್ಕರಣೆ ಚುನಾವಣಾ ಆಯೋಗದ ಕೆಲಸ. ಖಾಸಗಿ ಸಂಸ್ಥೆಗೆ ಯಾವ ಮಾನದಂಡದ ಆಧಾರದಲ್ಲಿ ಈ ಜವಾಬ್ಧಾರಿ ನೀಡಲಾಗಿದೆ.? ಈ ಅಕ್ರಮದಲ್ಲಿ ರಾಜ್ಯ ಚುನಾವಣಾ ಆಯೋಗದ ಪಾಲು ಇದ್ದಂತಿದೆ. ಹಾಗಾಗಿ ಈ ಕೂಡಲೇ ಕೇಂದ್ರ ಚುನಾವಣಾ ಆಯೋಗ ಮಧ್ಯ ಪ್ರವೇಶ ಮಾಡಿ ಈ ಆರೋಪದ ಬಗ್ಗೆ ಸವಿಸ್ತಾರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

PSI ಹಗರಣ, 40% ಕಮೀಷನ್ ಹಗರಣ, ಪ್ರಾಧ್ಯಾಪಕರ ನೇಮಕಾತಿ ಹಗರಣ ಸೇರಿದಂತೆ ಸಾಲು ಸಾಲು ಹಗರಣದಲ್ಲಿ ‌ಮುಳುಗಿರುವ ಈ ಸರ್ಕಾರದ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಹಾಗಾಗಿ ವಾಮಮಾರ್ಗದ ಮೂಲಕ ಚುನಾವಣೆ ಗೆಲ್ಲಲು BJP ನಾಯಕರು ಅಕ್ರಮ ಮತದಾರರ ಪಟ್ಟಿ ಪರಿಷ್ಕರಣೆಗೆ ಕೈ ಹಾಕಿದ್ದಾರೆ. ಅಧಿಕಾರಕ್ಕಾಗಿ ‌BJP ಎಂತಹ ಹೀನ ಕೆಲಸಕ್ಕೂ ಸೈ ಎಂದು ಕೆಂಡಕಾರಿದ್ದಾರೆ.

ಓಟರ್ ಐಡಿ ಹಗರಣದಲ್ಲಿ ಪ್ರಭಾವಿ ಸಚಿವರೊಬ್ಬರ ಕೈವಾಡವಿರುವ ಮಾಹಿತಿಯಿದೆ. ಆ ಬಗ್ಗೆಯೂ ತನಿಖೆಯಾಗಬೇಕು‌. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು. ಚುನಾವಣಾ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಈ ಹಗರಣವನ್ನು ಸರ್ಕಾರ‌ ಈ ಕೂಡಲೇ ನ್ಯಾಯಾಂಗ ತನಿಖೆಗೆ ಒಪ್ಪಿಸಲಿ ಎಂದು ಆಗ್ರಹಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಸ್ತೆಗುಂಡಿಯಿಂದ ಸಾವು; ನವೆಂಬರ್‌ 19ಕ್ಕೆ ಎಎಪಿ ಬೃಹತ್‌ ಪ್ರತಿಭಟನೆ

Next Post

ಡಿಸೆಂಬರ್‌ 19-29ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಡಿಸೆಂಬರ್‌ 19-29ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಡಿಸೆಂಬರ್‌ 19-29ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada