ಲಾರಿ-ಕಾರ್ ನಡುವೆ ಸಂಭವಿಸಿದ ಭಿಕರ ರಸ್ತೆ ಅಪಘಾತದಲ್ಲಿ 5 ಮಂದಿ ಮೃತಪಟ್ಟು, 4 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಎಕ್ಸ್‌ಪ್ರೆಸ್ ವೇನಲ್ಲಿ ನಡೆದಿದೆ.
ರಾಯಘಡ ಜಿಲ್ಲೆಯ ಖೋಪೋಲಿ ಬಳಿ ವೇಗವಾಗಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಓರ್ವ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ಪೈಕಿ ಐವರು ಪುರುಷರಾಗಿದ್ದು ನಾವರು ಮಹಿಳೆಯರಿದ್ದರು ಎಂದು ತಿಳಿದು ಬಂದಿದೆ. ಮುಂಬೈನಿಂದ ಪುಣೆ ಕಡೆ ಹೋಗುವಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಚಾಲಕನ ವಿರುದ್ದ ಪ್ರಕರಣವನ್ನ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.







