ಪ್ರೀತಿಸಿದ ಯುವತಿ ಮದುವೆಯಾಗಲು ಮತ್ತು ಮತಾಂತರವಾಗಲು ನಿರಾಕರಿಸಿದ್ದಕ್ಕಾಗಿ 4ನೇ ಮಹಡಿಯಿಂದ ಆಕೆಯನ್ನು ತಳ್ಳಿ ಹತ್ಯೆ ಮಾಡಿದ ಘಟನೆ ಉತ್ತರಪ್ರದೇಶದ ಲಖನೌನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಸೂಫಿಅಯನ್ ಎಂದು ಗುರುತಿಸಲಾಗಿದೆ. ಪಕ್ಕದ ಮನೆಯ ಯುವತಿಗೆ ಬಲವಂತವಾಗಿ ಮದುವೆಯಾಗಲು ಮತ್ತು ಮತಾಂತರವಾಗುವಂತೆ ಆರೋಪಿ ಪೀಡಿಸಿದ ಮತ್ತು ನಿರಾಕರಿಸಿದ್ದಕ್ಕಾಗಿ ಯುವತಿ ಹತ್ಯೆ ಮಾಡಿ ತಲೆಮಾರಿಸಿಕೊಂಡಿದ್ದ.

ಲಖನೌಪ್ರದೇಶದ ದುಬಗ್ಗಾ ಪ್ರದೇಶದಲ್ಲಿ ಆರೋಪಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ. ಈ ವೇಳೆ ಪೊಲೀಸರು ಆರೋಪಿ ಬಲಗಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.
ಆರೋಪಿ ವಿರುದ್ದ 302 ಹಾಗೂ ಮತಾಂತರ ನಿಷೇಧ ಕಾಯ್ದೆ ಅಡಿ ದೂರು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ದುಬಗ್ಗಾ ಪೊಲೀಸ್ ಠಾಣಾಧಿಕಾರಿ ಸುಖ್‌ವೀರ್ ಸಿಂಗ್ ಭದೌರಿಯಾ ತಿಳಿಸಿದ್ದಾರೆ.






