ಮೇಟಿಕುಪ್ಪೆ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ನಾಲ್ವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ರಮ ನಾಡಬಂದೂಕಿನ ಸಮೇತ ಜಿಂಕೆಯ ಮೃತದೇಹದ ಜೊತೆಗೆ ಬಂದೂಕು ಹಾಗೂ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅಭಿಷೇಕ್ ಮತ್ತು ನೆಹರು ನಾಯಕ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಆರೋಪಿಗಳು ಜಿಂಕೆ ಕೊಂದು ಮೃತದೇಹ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಿಸಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಅರಣ್ಯ ಇಲಾಖೆ ಅಧಿಕಾರಿಗಳು. ತಲೆ ಮರೆಸಿಕೊಂಡಿರುವ ಉಳಿದ ನಾಲ್ವರು ಆರೋಪಿಗಳಿಗಾಗಿ ತಂಡ ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.