ಮೈಸೂರಿನಲ್ಲಿ ಸಾಹಸಸಿಂಹ ದಿ || ಡಾ.ವಿಷ್ಣುವರ್ಧನ್ ಸ್ಮಾರಕವನ್ನ ಡಿಸೆಂಬರ್ ವೇಳೆಗೆ ಉದ್ಘಾಟನೆ ಮಾಡಲಾಗವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಜಯನಗರದಲ್ಲಿ ವಿಷ್ಣುವರ್ಧನ್ ಅವರ ನೂತನ ಮನೆಯ ಗೃಹಪ್ರವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಮನೆಯ ಗೃಹಪ್ರವೇಶ ಸಮಾರಂಭಕ್ಕೆ ಭಾರತಿ ವಿಷ್ಣುವರ್ಧಣ್ ಅವರು ಖುದ್ದಾಗಿ ಆಹ್ವಾನಿಸಿದ್ದರು. ಇದೀಗ ಅವರ ಮನೆ ನವೀಕರಣವಾಗಿದೆ ಇದರಲ್ಲಿ ಭಾರತಿ ಅವರ ಶ್ರಮ ಎದ್ದು ಕಾಣುತ್ತದೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮರಾಕ ಹಾಗೂ ವಸ್ತು ಸಂಗ್ರಹಾಲಯದ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು ಡಿಸೆಂಬರ್ ಒಳಗಾಗಿ ಉದ್ಘಾಟನೆ ಮಾಡಲಾಗುವುದು ಎಂದಿದ್ದಾರೆ.
ಅವರ ಕುಟುಂಬದ ಸದಸ್ಯರ ಜೊತೆ ತೀರ್ಮಾನಿಸಿ ಅವರ ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನ ಅದ್ದೂರಿಯಾಗಿ ಮಾಡಲಾಗುವುದು ಎಂದು ಹೇಳಿದ್ದಾರೆ.
