ಈ ವರ್ಷ ಮೇನಲ್ಲಿ ಕಾಂಗ್ರೆಸ್ ಅಧಿನಾಯಕಿ ನೇತೃತ್ವದಲ್ಲಿ ರಾಜಸ್ಥಾನದ ಉದಯ್ಪುರದಲ್ಲಿ ನಡೆದಿದ್ದ ಚಿಂತನ್ ಶಿವಿರದಲ್ಲಿ ಒಂದು ವ್ಯಕ್ತಿ ಒಂದು ಹುದ್ದೆ ಪ್ರಸ್ತಾವನೆಯನ್ನ ಅನಿವಾರ್ಯ ಕಾರಣಗಳಿಂದ ಕಾಂಗ್ರೆಸ್ ಪಕ್ಷ ಮುರಿಯಲಿದೆ ಎಂದು ತಿಳಿದು ಬಂದಿದೆ.
ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ದಿಸುವ ಸಲುವಾಗಿ ರಾಜ್ಯಸಭೆ ವಿರೋಧ ಪಕ್ಸಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಲ್ಲಿಕಾರ್ಜುನ ಖರ್ಗೆರನ್ನು ವಿಪಕ್ಷ ನಾಯಕನ ಸ್ಥಾನದಲ್ಲಿ ಮುಂದುವರೆಸಲು ಪಕ್ಷ ಯೋಜಿಸಿದ ಎಂದು ಹೇಳಲಾಗಿದೆ.
ಇತ್ತೀಚಿಗೆ ನಡೆದ ಕಾಂಗ್ರೆಸ್ ಪಕ್ಷದ ಸಂಸದೀಯ ಸಭೆಗೆ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಹಾಗೂ ಕೆ.ಸಿ.ವೇಣುಗೋಪಾಲ್ರನ್ನು ಆಹ್ವಾನಿಸಲಾಗಿತ್ತು ಮತ್ತು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪ್ರಮುಖ ಆಕಾಂಕ್ಷಿಗಳಾದ ದಿಗ್ವಿಜಯ್ ಸಿಂಗ್ ಹಾಗೂ ಪಿ.ಚಿದಂಬರಂರನ್ನು ಸಭೆಗೆ ಆಹ್ವಾನಿಸಿರಲಿಲ್ಲ ಎಂದು ತಿಳಿದು ಬಂದಿದೆ.