• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಿವಮೊಗ್ಗದಲ್ಲಿ ಆಪರೇಷನ್ ಕಮಲ: ಡಾ. ಧನಂಜಯ ಸರ್ಜಿ, ಕೆ.ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆ

ಪ್ರತಿಧ್ವನಿ by ಪ್ರತಿಧ್ವನಿ
December 4, 2022
in ರಾಜಕೀಯ
0
ಶಿವಮೊಗ್ಗದಲ್ಲಿ ಆಪರೇಷನ್ ಕಮಲ: ಡಾ. ಧನಂಜಯ ಸರ್ಜಿ, ಕೆ.ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆ
Share on WhatsAppShare on FacebookShare on Telegram

ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನಲೆ ಶಿವಮೊಗ್ಗದಲ್ಲಿ ಬಿಜೆಪಿ ಆಪರೇಶನ್ ಕಮಲ ಪ್ರಾರಂಭಿಸಿದೆ. ಸೊರಬ, ಶಿಕಾರಿಪುರ ಬಳಿಕ ಇದೀಗ ಸಾಗರ ಹಾಗೂ ಶಿವಮೊಗ್ಗ ಕ್ಷೇತ್ರದ ಪ್ರಮುಖರು ಬಿಜೆಪಿ ಸೇರಿದ್ದಾರೆ. ಸಾಗರದ ಕೆ.ಎಸ್.ಪ್ರಶಾಂತ್ ಹಾಗೂ ಖ್ಯಾತ ಮಕ್ಕಳ ತಜ್ಞ ಡಾ ಧನಂಜಯ್ ಸರ್ಜಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ADVERTISEMENT


ಮಾಜಿ ಸಂಸದ ಕೆ.ಜಿ.ಶಿವಪ್ಪ ಅವರ ಪುತ್ರ, ಸಾಗರದ ಯುವ ಮುಖಂಡರಾಗಿರುವ ಕೆ.ಎಸ್.‌ಪ್ರಶಾಂತ್ ಅವರು ಈ ಹಿಂದೆ ರಾಜಕೀಯವಾಗಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿದ್ದರು. ತನ್ನದೇ ಸಂಘಟನೆ ಮೂಲಕ ಸಾಮಾಜಿಕ ಚಟುವಟಿಕೆ ಮಾಡುತ್ತಿದ್ದರು. ಇದೀಗ ಕೆ.ಎಸ್.ಪ್ರಶಾಂತ್ ರನ್ನು ಬಿಜೆಪಿ ನಾಯಕರು ಪಕ್ಷಕ್ಕೆ ಸೆಳೆದುಕೊಂಡಿದ್ದಾರೆ. ಕಳೆದ ಕೆಲ ದಿನದಿಂದ ಬಿಜೆಪಿ ನಾಯಕರ ಜೊತೆ ಹಾಗೂ ಹಿಂದೂಪರ ಸಂಘಟನೆ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುತ್ತಿದ್ದ ಪ್ರಶಾಂತ್ ಬಿಜೆಪಿ ಸೇರಿದ್ದಾರೆ. ಪ್ರಶಾಂತ್ ಸೇರ್ಪಡೆಯಿಂದ ಸಾಗರ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಶುರುವಾಗಿದೆ. ರಾಜಕೀಯ ಹಿನ್ನೆಲೆ ಜೊತೆಗೆ ಸಾಗರದಲ್ಲಿ ಈಡಿಗ ಸಮುದಾಯ ಪ್ರಬಲವಾಗಿರುವ ಹಿನ್ನೆಲೆ ಹರತಾಳು ಹಾಲಪ್ಪ ಸೊರಬ ಕ್ಷೇತ್ರಕ್ಕೆ ಹೋದರೇ ಕೆ.ಎಸ್.ಪ್ರಶಾಂತ್ ಗೆ ಟಿಕೆಟ್ ಎಂಬ ಲೆಕ್ಕಾಚಾರ ಶುರುವಾಗಿದೆ.

ಡಾ. ಧನಂಜಯ ಸರ್ಜಿ, ಕೆ.ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆ

ಇನ್ನೊಂದೆಡೆ ಶಿವಮೊಗ್ಗ ನಗರದಲ್ಲಿ ಖ್ಯಾತ ಮಕ್ಕಳ ತಜ್ಞ ಡಾ.ಧನಂಜಯ್ ಸರ್ಜಿ ಬಿಜೆಪಿ ಸೇರಿದ್ದಾರೆ. ಇವರು ಕಳೆದ ಕೆಲವು ತಿಂಗಳಿಂದ ಸಾಮಾಜಿಕ ಚಟುವಟಿಕೆಗಳನ್ನು ಮಾಡುತ್ತ ಗುರುತಿಸಿಕೊಂಡಿದ್ದರು. ರಾಜಕೀಯವಾಗಿ ಗುರುತಿಸಿಕೊಳ್ಳಲು ನೆಲೆ ಹುಡುಕುತ್ತಿದ್ದ ಧನಂಜಯ್ ಸರ್ಜಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಇನ್ನು ಬಿಜೆಪಿ, ಕಾಂಗ್ರೆಸ್, ಅಪ್ ಸೇರ್ಪಡೆ ಜೊತೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸರ್ಜಿ ಸ್ಫರ್ಧಿಸುವ ಬಗ್ಗೆ ಚರ್ಚೆಯಾಗುತ್ತಿತ್ತು. ಅಂತಿಮವಾಗಿ ಧನಂಜಯ್ ಸರ್ಜಿ ಯವರನ್ನು ಬಿಜೆಪಿ ತನ್ನ ಪಕ್ಷಕ್ಕೆ ಸೆಳೆದುಕೊಂಡಿದೆ

Tags: ಕೆ.ಎಸ್. ಪ್ರಶಾಂತ್ಡಾ. ಧನಂಜಯ ಸರ್ಜಿಬಿಜೆಪಿಬಿಜೆಪಿ ಸೇರ್ಪಡೆ
Previous Post

Shivamogga : PFI ಪರ ಗೋಡೆ ಬರಹ ಬಗ್ಗೆ CM Bommai ರಿಯಾಕ್ಷನ್ | Basavaraj Bommai | Pratidhvani

Next Post

”ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಅನಾವರಣ

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
”ವಿರಾಟಪುರ ವಿರಾಗಿ” ಚಿತ್ರದ ಮೊದಲ ನೋಟ ಅನಾವರಣ

''ವಿರಾಟಪುರ ವಿರಾಗಿ" ಚಿತ್ರದ ಮೊದಲ ನೋಟ ಅನಾವರಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada