ಭಾರೀ ಕುತೂಹಲ ಮೂಡಿಸಿದ್ದ ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಡಿಸೆಂಬರ್ 8ರಂದು ಹೊರಬೀಳಲಿದ್ದು ಗದ್ದುಗೆಗಾಗಿ ಗುದ್ದಾಟ ಜೋರಾಗಿ ನಡೆಯುತ್ತಿದೆ.
182 ಸದಸ್ಯ ಬಲದ ಗುಜರಾತ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಬಿಜೆಪಿ 155, ಕಾಂಗ್ರೆಸ್ 15, ಎಎಪಿ 7, ಪಕ್ಷೇತರರು 5 ವಿಧಾನಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇನ್ನು 68 ಸದಸ್ಯ ಬಲದ ಹಿಮಾಚಲ ಪ್ರದೇಶಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು ಬಿಜೆಪಿ 30, ಕಾಂಗ್ರೆಸ್ 35, ಪಕ್ಷೇತರರು 3 ವಿಧಾನಸಭಾಕ್ಷೇತ್ರಗಳಲ್ಲಿ ಮಿನ್ನಡೆ ಕಾಯ್ದುಕೊಂಡಿದ್ದಾರೆ.
ಇನ್ನು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಡುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದೆ.


