• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಗುಜರಾತ್‌ ರೀತಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಕೆ.ಎಸ್.‌ ಈಶ್ವರಪ್ಪ ವಿಶ್ವಾಸ

Any Mind by Any Mind
December 9, 2022
in ರಾಜಕೀಯ
0
ಗುಜರಾತ್‌ ರೀತಿ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಕೆ.ಎಸ್.‌ ಈಶ್ವರಪ್ಪ ವಿಶ್ವಾಸ
Share on WhatsAppShare on FacebookShare on Telegram

ಗುಜರಾತ್‌ ಚುನಾವಣಾ ಫಲಿತಾಂಶದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಗುಜರಾತ್ ಸಾಕಷ್ಟು ಅಭಿವೃದ್ಧಿಯಾಗಿದೆ. ಗುಜರಾತ್‌ ದೇಶಕ್ಕೆ ಮಾದರಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ಮಾದರಿಯಾಗಿದ್ದಾರೆ

ADVERTISEMENT

ಶಿವಮೊಗ್ಗ: ಗುಜರಾತ್‌ ರೀತಿಯಲ್ಲಿ ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಸಹ ನಾವು ಗೆಲ್ಲುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್.‌ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಗುಜರಾತ್‌ ಚುನಾವಣಾ ಫಲಿತಾಂಶದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಗುಜರಾತ್ ಸಾಕಷ್ಟು ಅಭಿವೃದ್ಧಿಯಾಗಿದೆ. ಗುಜರಾತ್‌ ದೇಶಕ್ಕೆ ಮಾದರಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಕ್ಕೆ ಮಾದರಿಯಾಗಿದ್ದಾರೆ. ಗುಜರಾತ್ ಹೋಗಿ ನೋಡಿದರೆ ಅಲ್ಲಿನ ಅಭಿವೃದ್ಧಿ ಏನು ಎಂಬುದು ಗೊತ್ತಾಗುತ್ತದೆ. ಕೈಗಾರಿಕೆಗಳಿಗೆ ನಿರಂತರ ವಿದ್ಯುತ್, ರೈತರ ಜಮೀನಿಗೆ ನೀರು ಒದಗಿಸಿ ಮಾದರಿಯಾಗಿದೆ ಎಂದರು.


ಅದೇ ರೀತಿಯಲ್ಲಿ ನಾವು ನಮ್ಮ ರಾಜ್ಯದಲ್ಲೂ ಅಭಿವೃದ್ಧಿ ಮಾಡಿದ್ದೇವೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಗುಜರಾತ್ ರೀತಿಯಲ್ಲಿ ನಾವು ಸಹ ಗೆಲ್ಲುತ್ತೇವೆ. ಗುಜರಾತ್‌ನಲ್ಲಿ ಪೇಜ್ ಪ್ರಮುಖ ರಚನೆ ಯಶಸ್ವಿಯಾಗಿದ್ದು, ನಮ್ಮ ರಾಜ್ಯದಲ್ಲೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪೇಜ್ ಪ್ರಮುಖ ರಚಿಸಿದ್ದೇವೆ. ಹೀಗಾಗಿ ಕರ್ನಾಟಕದಲ್ಲೂ ಬಿಜೆಪಿಗೆ ಪೂರ್ಣ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗುಜರಾತ್‌ ಚುನಾವಣೆಯ ಫಲಿತಾಂಶದಿಂದ ಇಡೀ ದೇಶಕ್ಕೆ ಸಂತೋಷವಾಗಿದೆ. ಮುಂದಿನ ವರ್ಷ ಲೋಕಸಭಾ ಚುನಾವಣೆ ಇದ್ದು, ಅಲ್ಲೂ ಗೆಲುವು ಸಾಧಿಸಲು ಈ ಫಲಿತಾಂಶ ದಿಕ್ಸೂಚಿ ಆಗಲಿದೆ. ಅಲ್ಲದೇ ಯಡಿಯೂರಪ್ಪ, ಬೊಮ್ಮಾಯಿ, ಕಟೀಲ್ ನೇತೃತ್ವದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ ಎಂದು ತಿಳಿಸಿದರು.


ಇದೇ ವೇಳೆ ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಈಶ್ವರಪ್ಪ, ಅಧಿಕಾರಕ್ಕಾಗಿ ಕಾಂಗ್ರೆಸ್ ಮುಖಂಡರು ಜಗಳ ಆಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ 150 ಅಲ್ಲ 15 ಸೀಟು ಗೆಲುವು ಸಾಧಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ ನಾಯಕರಿಗೆ ದೇಶದೆಲ್ಲೆಡೆ ಸೋತು ಸಾಕಾಗಿದ್ದು, ಹೀಗಾಗಿ ಈ ಸೋಲಿನ ಹೊಣೆ ತಮ್ಮ ಮೇಲೆ ಬರಬಾರದೆಂದು ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಮುಂದೆ ಅವರಿಂದಲೇ ಕಾಂಗ್ರೆಸ್ ಸೋತಿದೆ ಎಂದು ಆರೋಪ ಹೊರಿಸುತ್ತಾರೆ ಎಂದು ಅವರು, ಆಮ್ ಆದ್ಮಿ ಪ್ರಾದೇಶಿಕ ಪಕ್ಷದಂತೆ ಅಲ್ಲೊಂದು ಇಲ್ಲೊಂದು ಗೆದ್ದಿದೆ. ದೆಹಲಿ ಬಿಟ್ಟರೆ ಬೇರೆಲ್ಲೂ ಅವರಿಗೆ ಅಧಿಕಾರ ಸಿಕ್ಕಿಲ್ಲ ಎಂದರು.

Tags: ಕೆ.ಎಸ್.‌ ಈಶ್ವರಪ್ಪಗುಜರಾತ್‌ಬಿಜೆಪಿಶಿವಮೊಗ್ಗ
Previous Post

ಸೋತರೂ ಸಾಧನೆ ಮಾಡಿದ ಆಮ್​ ಆದ್ಮಿ, ಕಾಂಗ್ರೆಸ್​ಗೇ ಕಂಟಕ..!

Next Post

ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ನಾಲ್ವರು ಸಾವು..!

Related Posts

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..
Top Story

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

by ಪ್ರತಿಧ್ವನಿ
April 17, 2026
0

ಬೆಂಗಳೂರು :  ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ನಾಲ್ವರು ಸಾವು..!

ಮದುವೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟ; ನಾಲ್ವರು ಸಾವು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada