ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಕೀಲರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಮಂಡ್ಯದಲ್ಲಿ ವಕೀಲರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ಸಂಜಯ್ ವೃತ್ತದಲ್ಲಿ ಬೃಹತ್ ಸಂಖ್ಯೆಯಲ್ಲಿ ಆಗಮಿಸಿದ ವಕೀಲರು ಮಾನವ ಸರಪಳಿ ರಚಿಸಿ ಬೆಂಗಳೂರು-ಮೈಸೂರು ಹೆದ್ದಾರಿಯನ್ನ ತಡೆದು ಪೊಲೀಸ್ ಇಲಾಖೆ ವಿರುದ್ದ ಘೋಷಣೆಗಳನ್ನ ಕೂಗಿದರು.
ಈ ವೇಳೆ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ ವಕೀಲರ ಮೇಲೆ ಆರೋಪಗಳು ಇಲ್ಲ, ಕೇಸ್ ಕೂಡ ಇಲ್ಲ ಕಳ್ಳತನದ ಕೇಸ್ ದಾಖಲಿಸಿ ಬಂಧಿಸಿದ್ದಾರೆ ನಿರ್ದಾಕ್ಷಿಣ್ಯವಾಗಿ ವಕೀಲರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಪೊಲೀಸರು ಈ ರೀತಿ ವಕೀಲರ ಮೇಲೆ ದೌರ್ಜನ್ಯ ನಡೆಸಿರುವುದು ಖಂಡನಿಯ ತಕ್ಷಣವೇ ದೌರ್ಜನ್ಯ ನಡೆಸಿದ ಪೊಲೀಸರ ವಿರುದ್ದ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.


